ವಿವಿಧ ರಾಜ್ಯಗಳಿಗೆ ಮೇ 10 ರಿಂದ 16 ರವರೆಗಿನ ಬಳಕೆಗಾಗಿ ಕೇಂದ್ರದಿಂದ 19.2 ಲಕ್ಷ ರೆಮಿಡಿಸಿವಿರ್ ವಯಲ್ಸ್ ಹಂಚಿಕೆ
ವಿವಿಧ ರಾಜ್ಯಗಳಿಗೆ ಮೇ 10ರಿಂದ 16ರವರೆಗಿನ ಬಳಕೆಗಾಗಿ 19.2 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ವಯಲ್ಸ್ ಗಳನ್ನುಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ.

ನವದೆಹಲಿ: ವಿವಿಧ ರಾಜ್ಯಗಳಿಗೆ ಮೇ 10ರಿಂದ 16ರವರೆಗಿನ ಬಳಕೆಗಾಗಿ 19.2 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ವಯಲ್ಸ್ ಗಳನ್ನು
ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ. ಕರ್ನಾಟಕಕ್ಕೆ 2,62,346 ವಯಲ್ಸ್ ( ಶೇ.13.6) ಒದಗಿಸಲಾಗಿದೆ.ಏಪ್ರಿಲ್ 21ರಿಂದ ವಿವಿಧ ರಾಜ್ಯಗಳಿಗೆ ಒಟ್ಟು 53 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದ್ದು, ರಾಜ್ಯಕ್ಕೆ 5 ಲಕ್ಷದ 75 ಸಾವಿರ ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರೆಮಿ ಡಿಸಿವಿರ್ ಹಂಚಿಕೆಯನ್ನು 2,62,346 ವಯಲ್ಸ್ ಗೆ ಹೆಚ್ಚಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದ ಮನವಿಗೆ ಸ್ಪಂದಿಸಿ ಅಗತ್ಯ ಔಷಧ ಪೂರೈಸುತ್ತಿರುವ ಕೇಂದ್ರ ಸಚಿವ ಡಿ. ವಿ. ಸದಾನಂದಗೌಡ ಅವರಿಗೆ ಧನ್ಯವಾದಗಳು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


