ಜನರ ಜೀವನವನ್ನು ಕೇಂದ್ರವಾಗಿಸಿ, ನಿಮ್ಮ ಕುರುಡು ದುರಹಂಕಾರವನ್ನಲ್ಲ: ಸೆಂಟ್ರಲ್ ವಿಸ್ಟಾ ಯೋಜನೆ ಕುರಿತು ರಾಹುಲ್ ಗಾಂಧಿ ವಾಗ್ದಾಳಿ
ಕೇಂದ್ರ ಸರ್ಕಾರದ "ಸೆಂಟ್ರಲ್ ವಿಸ್ಟಾ " ಯೋಜನೆ ಕುರಿತು ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅದೊಂದು "ಕ್ರಿಮಿನಲ್ ವೇಸ್ಟ್" ಎಂದು ಕರೆದಿದ್ದಾರೆ. ಅಲ್ಲದೆ ತಮ್ಮ ಗಮನವನ್ನು ಜನರ ಜೀವನದ ಮೇಲೆ ಕೇಂದ್ರೀಕರಿಸುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ "ಸೆಂಟ್ರಲ್ ವಿಸ್ಟಾ " ಯೋಜನೆ ಕುರಿತು ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅದೊಂದು "ಕ್ರಿಮಿನಲ್ ವೇಸ್ಟ್" ಎಂದು ಕರೆದಿದ್ದಾರೆ. ಅಲ್ಲದೆ ತಮ್ಮ ಗಮನವನ್ನು ಜನರ ಜೀವನದ ಮೇಲೆ ಕೇಂದ್ರೀಕರಿಸುವಂತೆ ಒತ್ತಾಯಿಸಿದ್ದಾರೆ.
"ಸೆಂಟ್ರಲ್ ವಿಸ್ಟಾ" ಪುನರಾಭಿವೃದ್ಧಿ ಯೋಜನೆ - ದೇಶದ ವಿದ್ಯುತ್ ಕಾರಿಡಾರ್ - ಹೊಸ ಟ್ರಯಾಂಗಲ್ ಸಂಸತ್ತು ಕಟ್ಟಡ, ಸಾಮಾನ್ಯ ಕೇಂದ್ರ ಕಾರ್ಯದರ್ಶಿ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ಗೆ ಮೂರು ಕಿ.ಮೀ ಉದ್ದದ ರಾಜ್‌ಪಥ್ ನವೀಕರಣ ಪ್ರಧಾನಿ ಹಾಗೂ ಉಪರಾಷ್ಟ್ರಪತಿಗಳಿಗೆ ಹೊಸ ನಿವಾಸಗಳ ನಿರ್ಮಾಣವನ್ನು ಒಳಗೊಂಡಿದೆ. ಯೋಜನೆಯನ್ನು ಕಾರ್ಯಗತಗೊಳಿಸುತ್ತಿರುವ ಸಿಪಿಡಬ್ಲ್ಯುಡಿ ತನ್ನ ಅಂದಾಜು ವೆಚ್ಚವನ್ನು 11,794 ಕೋಟಿಯಿಂದ 13,450 ಕೋಟಿ ರೂ.ಗಳಿಗೆ ಪರಿಷ್ಕರಿಸಿದೆ.
"ಸೆಂಟ್ರಲ್ ವಿಸ್ಟಾ ಯೋಜನೆ ಒಂದು ಕ್ರಿಮಿನಲ್ ವೇಸ್ಟ್ ಅದರ ಬದಲು ಜನರ ಜೀವನವನ್ನು ಕೇಂದ್ರವಾಗಿಸಿಕೊಳ್ಳಿ, ನಿಮ್ಮ ಕುರುಡು ದುರಹಂಕಾರವನ್ನಲ್ಲ" ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
ಜನರ ಜೀವ ಉಳಿಸಲು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಬೇಕು, ಅದಕ್ಕಾಗಿ ಸೆಟ್ರಲ್ ವಿಸ್ಟಾ ಯೋಜನೆಗಳನ್ನು ಸ್ಥಗಿತಗೊಳಿಸಲು ಮತ್ತು ವೈದ್ಯಕೀಯ ಮೂಲಸೌಕರ್ಯಗಳನ್ನು ಸುಧಾರಿಸಲು ಆದ್ಯತೆ ನೀಡಬೇಕು ಎಂದು ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಕೇಂದ್ರ ಸರ್ಕಾರವನ್ನು ಕೇಳುತ್ತಿದೆ.
ಸೆಂಟ್ರಲ್ ವಿಸ್ಟಾ ಯೋಜನೆಯ "ಅಗತ್ಯ ಸೇವೆಗಳು" ಟ್ಯಾಗ್ ನಲ್ಲಿರಿಸಿರುವ ಸರ್ಕಾರದ ಕ್ರಮವನ್ನು ರಾಹುಲ್ ಟೀಕಿಸಿದ್ದಾರೆ. ಇದು ಸರ್ಕಾರದ ಆದ್ಯತೆಯು ತಪ್ಪಾಗಿದೆ ಎನ್ನುವುದರ ಸೂಚನೆ ಎಂದಿದ್ದಾರೆ. ರಾಷ್ಟ್ರದ ರಾಜಧಾನಿಯಲ್ಲಿ ಲಾಕ್ ಡೌನ್ ಹೊರತಾಗಿಯೂ ಯೋಜನೆಯ ಕಾಮಗಾರಿ ಮುಂದುವರೆದಿದೆ ಯೋಜನೆಯ ನಿರ್ಮಾಣ ಕಾರ್ಯಗಳನ್ನು "ಅಗತ್ಯ ಸೇವೆಗಳ" ವ್ಯಾಪ್ತಿಗೆ ತರಲಾಗಿದೆ, ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


