ದೇಶ

ಆಂಧ್ರ ಪ್ರದೇಶ: ಕಡಪ ಕಲ್ಲು ಗಣಿಯಲ್ಲಿ ಸ್ಫೋಟ;  9 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಆಂಧ್ರ ಪ್ರದೇಶ: ಕಡಪ ಕಲ್ಲು ಗಣಿಯಲ್ಲಿ ಸ್ಫೋಟ;  9 ಮಂದಿ ಸಾವು, ಇಬ್ಬರಿಗೆ ಗಂಭೀರ ಗಾಯ
ಸಂಗ್ರಹ ಚಿತ್ರ
Published On :

ಆಂಧ್ರಪ್ರದೇಶ: ಆಂಧ್ರಪ್ರದೇಶದ ಕಡಪದ ಕಲ್ಲುಗಣಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. 

ಮಾಮಿಲ್ಲಪಲ್ಲೆ ಗ್ರಾಮದ ಸಮೀಪ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 

ಅನುಮತಿ ಪಡೆದೇ ಸ್ಥಳದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ಜಿಲೆಟಿನ್ ಕಡ್ಡಿಗಳನ್ನು ಬುದ್ವೆಲ್ ನಿಂದ ತರಲಾಗಿದ್ದು, ಈ ಜಿಲೆಟಿನ್ ಕಡ್ಡಿಗಳನ್ನು ಅನ್ಲೋಡ್ ಮಾಡುವ ವೇಳೆ ಸ್ಫೋಟ ಸಂಭವಿಸಿದೆ ಎಂದು ಕಡಪ ಜಿಲ್ಲೆಯ ಪೊಲೀಸ್ ಅಧಿಕಾರಿ ಕೆ.ಎ.ಅನ್ಬುರಾಜನ್ ಅವರು ಹೇಳಿದ್ದಾರೆ. 

ಸ್ಪೋಟದಿಂದ ಬಲಿಯಾದವರಲ್ಲಿ ಹೆಚ್ಚಿನವರು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸ್ಥಳೀಯ ಗ್ರಾಮವಾದ ಪುಲಿವೆಂಡುಲ ಮೂಲದವರು ಎಂದು ಹೇಳಲಾಗುತ್ತಿದೆ. 

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿಯವರು ಕಡಪ ಜಿಲ್ಲೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.