ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹ ನಡುವೆ ಕೇಂದ್ರ ವರಿಷ್ಠರನ್ನು ಭೇಟಿಯಾದ ಹಿಮಂತ ಬಿಸ್ವಾ ಶರ್ಮಾ!
ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹಾಗಳ ನಡುವೆ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ನವದೆಹಲಿ: ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಊಹಾಪೋಹಾಗಳ ನಡುವೆ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಮುಂದಿನ ಸರ್ಕಾರದ ನಾಯಕತ್ವ ಕುರಿತು ಚರ್ಚಿಸಲು ದೆಹಲಿಗೆ ಬರುವಂತೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲ್ ಮತ್ತು ಆರೋಗ್ಯ ಸಚಿವ ಹಿಮಂತ ಶರ್ಮಾ ಅವರಿಗೆ ಶುಕ್ರವಾರ ಕೇಂದ್ರದ ವರಿಷ್ಠರಿಂದ ಬುಲಾವ್ ಬಂದಿತ್ತು. ಆದ್ದರಿಂದ ಅಸ್ಸಾಂನ ಉಭಯ ನಾಯಕರು ಇಂದು ಬೆಳಗ್ಗೆ ದೆಹಲಿಗೆ ತೆರಳಿದ್ದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನಿವಾಸದಲ್ಲಿ ಜೆ.ಪಿ. ನಡ್ಡಾ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್
ಅವರನ್ನು ಶರ್ಮಾ ಭೇಟಿಯಾದರು ಎಂಬುದು ಮೂಲಗಳಿಂದ ತಿಳಿದುಬಂದಿದೆ. ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ
ಅವರನ್ನು ಭೇಟಿಯಾಗಿದ್ದಾರೆ.
ಸೊನೊವಾಲ್ ಕೂಡಾ ಬಿಜೆಪಿ ವರಿಷ್ಠರ ಜೊತೆಗೆ ಸಭೆಗಾಗಿ ಜೆ.ಪಿ. ನಡ್ಡಾ ಅವರ ನಿವಾಸಕ್ಕೆ ತೆರಳುವ ಸಾಧ್ಯತೆಯಿದೆ.ಅಲ್ಲಿ ಅಸ್ಸಾಂನ
ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ನಿರ್ಧಾರವಾಗಲಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆಯೇ ಎಂಬುದರ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ತಿಳಿದುಬಂದಿಲ್ಲ.
2016ರ ವಿಧಾನಸಭಾ ಚುನಾವಣೆಯಲ್ಲಿ ಸೊನೊವಾಲ್ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಬಿಂಬಿಸಿತ್ತು, ನಂತರ
ಗೆದ್ದ ನಂತರ ಈಶಾನ್ಯ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ರಚಿಸಿತ್ತು. ಈ ಬಾರಿ ಚುನಾವಣೆ ನಂತರ ಮುಖ್ಯಮಂತ್ರಿ ಅಭ್ಯರ್ಥಿಯನ್ನು ನಿರ್ಧರಿಸುವುದಾಗಿ ಪಕ್ಷ ಹೇಳಿತ್ತು.
126 ಸದಸ್ಯ ಬಲದ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ,ಅದರ ಮೈತ್ರಿ ಪಕ್ಷ ಎಜಿಪಿ
9 ಹಾಗೂ ಯುಪಿಪಿಎಲ್ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


