ಐಎನ್ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಬೆಂಕಿ, ಎಲ್ಲಾ ಸಿಬ್ಬಂದಿ ಸುರಕ್ಷಿತ: ನೌಕಾಪಡೆ
ದೇಶದ ಐಎನ್ ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಶನಿವಾರ ಬೆಳಗ್ಗೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿರುವುದಾಗಿ ನೌಕಪಡೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ಮುಂಬೈ: ದೇಶದ ಐಎನ್ ಎಸ್ ವಿಕ್ರಮಾದಿತ್ಯ ಯುದ್ಧ ನೌಕೆಯಲ್ಲಿ ಶನಿವಾರ ಬೆಳಗ್ಗೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿರುವುದಾಗಿ ನೌಕಪಡೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ಯುದ್ಧ ನೌಕೆಯ ನಾವಿಕರು ವಸತಿ ಹೊಂದಿರುವ ಭಾಗದಿಂದ ಹೊಗೆ ಬರುತ್ತಿದ್ದನ್ನು ಕರ್ತವ್ಯ ನಿರತ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುದ್ಧ ನೌಕೆಯಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಯಾವುದೇ ದೊಡ್ಡ ಪ್ರಮಾಣದ ಹಾನಿ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ವಿಚಾರಣೆಗೆ ಆದೇಶಿಸಲಾಗಿದೆ. ಯುದ್ಧ ನೌಕೆ ಇದೀಗ ಬಂದರಿನಲ್ಲಿರುವುದಾಗಿ ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


