ರಾಜ್ಯಗಳ ಬಳಿ ಇನ್ನೂ 84 ಲಕ್ಷ ಡೋಸ್ ಕೋವಿಡ್ ಲಸಿಕೆ ಲಭ್ಯ, ಇದುವರೆಗೆ 17.49 ಕೋಟಿ ಪೂರೈಕೆ: ಕೇಂದ್ರ
ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 53 ಲಕ್ಷ (53,25,000)ಕೋವಿಡ್ ಲಸಿಕೆ ಡೋಸ್ ಗಳನ್ನು ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 53 ಲಕ್ಷ (53,25,000)ಕೋವಿಡ್ ಲಸಿಕೆ ಡೋಸ್ ಗಳನ್ನು ಪಡೆಯಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಕೇಂದ್ರ ಸರ್ಕಾರ ಈವರೆಗೆ 17.49 ಕೋಟಿಗೂ ಹೆಚ್ಚು ಉಚಿತ ಲಸಿಕೆ ಡೋಸ್ ಗಳನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪೂರೈಸಿದೆ. ಅನುಪಯುಕ್ತ ಲಸಿಕೆ ಸೇರಿದಂತೆ 16,65,49,583 ಡೋಸ್ ಗಳನ್ನು ದೇಶಾದ್ಯಂತ ಈವರೆಗೆ ಬಳಸಿಕೊಳ್ಳಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 84 ಲಕ್ಷಕ್ಕೂ ಹೆಚ್ಚು ಕೋವಿಡ್ ಲಸಿಕೆ ಡೋಸ್ (84,08,187) ಲಭ್ಯವಿದೆ ಎಂದು ಸಚಿವಾಲಯ ತಿಳಿಸಿದೆ.
ದೆಹಲಿಗೆ 40.22 ಲಕ್ಷ ಕೋವಿಡ್ ಲಸಿಕೆ ಡೋಸ್ ನೀಡಲಾಗಿದ್ದು, ಅದರಲ್ಲಿ 36.09 ಲಕ್ಷ ಡೋಸ್‌ಗಳನ್ನು ಬಳಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಇನ್ನೂ 4.12 ಲಕ್ಷ ಡೋಸ್‌ಗಳ ಬಾಕಿ ಉಳಿದಿವೆ ಮತ್ತು ಮುಂದಿನ ಮೂರು ದಿನಗಳಲ್ಲಿ ಇನ್ನೂ ಒಂದು ಲಕ್ಷ ಡೋಸ್ ಲಸಿಕೆ ನೀಡುವ ಸಾಧ್ಯತೆಯಿದೆ ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


