ಮಹಾರಾಷ್ಟ್ರ: 24 ಗಂಟೆಗಳ ಅವಧಿಯಲ್ಲಿ ದಾಖಲೆಯ 82,266 ಮಂದಿ ಸೋಂಕಿತರು ಗುಣಮುಖ
ಕೋವಿಡ್-19 ಸೋಂಕಿನ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 82,266 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮುಂಬೈ: ಕೋವಿಡ್-19 ಸೋಂಕಿನ ಹಾಟ್ ಸ್ಪಾಟ್ ಆಗಿದ್ದ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 82,266 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ಮತ್ತೆ 50 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಾದ್ಯಂತ 53,605 ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 50,53,336ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು 864 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಈ ವರೆಗೂ ಕೋವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 75,277ಕ್ಕೆ ಏರಿಕೆಯಾಗಿದೆ.
ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ 82,266 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಕೋವಿಡ್-19 ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 43,47,592 ಕ್ಕೇರಿಕೆಯಾಗಿದ್ದು, ಪ್ರಸ್ತುತ ಮಹಾರಾಷ್ಟ್ರದಲ್ಲಿ 6,28,213 ಸಕ್ರಿಯ ಪ್ರಕರಣಗಳಿವೆ.
ಮುಂಬೈನಲ್ಲಿ 2,664 ಹೊಸ ಸೋಂಕು ಪ್ರಕರಣಗಳು ಪತ್ತೆ
ಇನ್ನು ಮಹಾರಾಷ್ಟ್ರ ಮತ್ತು ದೇಶದ ವಾಣಿಜ್ಯ ರಾಜಧಾನಿ ಎಂದೇ ಕರೆಯಲಾಗುವ ಮುಂಬೈನಲ್ಲಿ ಇಂದು 2,664 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಮುಂಬೈನಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 6,73,235ಕ್ಕೆ ಏರಿಕೆಯಾಗಿದ್ದು, 13,713 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


