ದೇಶ

ಕೋವಿಡ್-19: ಸರ್ವಪಕ್ಷಗಳ ಸಭೆ ಕರೆಯುವಂತೆ ಪ್ರಧಾನಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ದೇಶದಲ್ಲಿ ಕೋವಿಡ್‍ ಸಾಂಕ್ರಾಮಿಕ ನಿಗ್ರಹಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಶೀಘ್ರವೇ ಸರ್ವಪಕ್ಷಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ.

ಕೋವಿಡ್-19: ಸರ್ವಪಕ್ಷಗಳ ಸಭೆ ಕರೆಯುವಂತೆ ಪ್ರಧಾನಿಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ಮಲ್ಲಿಕಾರ್ಜುನ ಖರ್ಗೆ
Published On :

ಬೆಂಗಳೂರು: ದೇಶದಲ್ಲಿ ಕೋವಿಡ್‍ ಸಾಂಕ್ರಾಮಿಕ ನಿಗ್ರಹಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಮತ್ತು ಕೊರೋನಾ ವೈರಸ್‍ ನ ಎರಡನೇ ಅಲೆಯ ಕುರಿತು ಚರ್ಚಿಸಲು ಶೀಘ್ರವೇ ಸರ್ವಪಕ್ಷಗಳ ಸಭೆ ಕರೆಯುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. 

ಎಲ್ಲರಿಗೂ ಕೋವಿಡ್ ‍ಲಸಿಕೆ ಲಭ್ಯವಾಗುವಂತಾಗಲು ಕೇಂದ್ರ ಬಜೆಟ್ ನಲ್ಲಿ ಸಂಸತ್‍ 35,000 ಕೋಟಿ ರೂ. ಒದಗಿಸಿದೆಯಾದರೂ, ಕೇಂದ್ರ ಸರ್ಕಾರ, ಲಸಿಕೆಯನ್ನು ವಿವಿಧ ದರಗಳಲ್ಲಿ ಮಾರಾಟ ಮಾಡಲು ಖಾಸಗಿ ಕಂಪೆನಿಗಳಿಗೆ ಅನುಮತಿಸಿದೆ ಎಂದು ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಖರ್ಗೆ ಹೇಳಿದ್ದಾರೆ. 

ಜೀವರಕ್ಷಕ ಸಾಧನಗಳು ಮತ್ತು ಔಷಧಗಳ ಮೇಲಿನ ಜಿಎಸ್ ಟಿ ರದ್ದುಪಡಿಸಬೇಕು ಮತ್ತು ಮನ್ರೇಗಾ ಯೋಜನೆಯಡಿ ಕೆಲಸದ ಅವಧಿಯನ್ನು 200 ತಾಸಿಗೆ ಹೆಚ್ಚಿಸಬೇಕು. ಎಲ್ಲ ರಾಜ್ಯಗಳಿಗೆ ನ್ಯಾಯಯುತವಾಗಿ ಪರಿಹಾರ ಸಾಮಗ್ರಿಯನ್ನು ವಿತರಿಸಬೇಕು. ಕೋವಿಡ್ ಲಸಿಕೆ ಉತ್ಪಾದನೆ ಹೆಚ್ಚಿಸಲು ಕಡ್ಡಾಯ ಪರವಾನಿಗೆ ಅಧಿಕಗೊಳಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.