ಕೋವಿಡ್-19: ಬಿಎಸ್ ವೈ ಸೇರಿ ನಾಲ್ಕು ರಾಜ್ಯಗಳ ಸಿಎಂಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಕರ್ನಾಟಕ, ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ಕರ್ನಾಟಕ, ಪಂಜಾಬ್, ಬಿಹಾರ್ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿನ ಪರಿಸ್ಥಿತಿ ಕುರಿತಂತೆ ಆ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಗವರ್ನರ್ ಗಳೊಂದಿಗೆ
ಪ್ರಧಾನಿ ಮೋದಿ ಕೋವಿಡ್ ಪರಿಸ್ಥಿತಿ ಕುರಿತು ಮಾತನಾಡುತ್ತಿದ್ದು, ಸಲಹೆಗಳನ್ನು ನೀಡುತ್ತಿದ್ದಾರೆ.
ಕೋವಿಡ್-19 ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಗೆ ಮಾಹಿತಿ ನೀಡುತ್ತಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,03,738 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುವುದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. 4,092 ಸಾವು ಪ್ರಕರಣಗಳೊಂದಿಗೆ ಒಟ್ಟಾರೇ ಸಾವಿನ ಸಂಖ್ಯೆ 2,42,362 ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


