ದೇಶ

ತಮಿಳುನಾಡು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ

ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ತಮಿಳುನಾಡು ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಎಡಪ್ಪಾಡಿ ಪಳನಿಸ್ವಾಮಿ ಆಯ್ಕೆ
ಪಳನಿಸ್ವಾಮಿ
Published On :

ಚೆನ್ನೈ: ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಮೂರು ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಹೀಗಾಗಿ ಅವರೇ ಅಂತಿಮವಾಗಿ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಲಿದ್ದಾರೆ.

ಶಾಸಕರು ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕಾರಿ ಪಳನಿಸ್ವಾಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಎಐಎಡಿಎಂಕೆ ಪ್ರಕಟಣೆಯಲ್ಲಿ ತಿಳಿಸಿದೆ. 

ಆದಾಗ್ಯೂ, ಬಹುಶಃ ಮೊದಲ ಬಾರಿಗೆ ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕನನ್ನು ಆಂತರಿಕ ವಿರೋಧದ ನಂತರ ಮತ್ತು ದೀರ್ಘಕಾಲದ ಚರ್ಚೆಯ ನಂತರ ಘೋಷಿಸಲಾಗಿದೆ.

ಮೇ 7 ರಂದು ನಡೆದ ಎಐಎಡಿಎಂಕೆ ಶಾಸಕಾಂಗ ಪಕ್ಷದ ಮೊದಲ ಸಭೆ ನಾಯಕನನ್ನು ಆಯ್ಕೆ ಮಾಡದೆ ಕೊನೆಗೊಂಡಿತು. ಈಗ ಅಂತಿಮವಾಗಿ ಪಳನಿಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.