ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡುವ ಪ್ರಸ್ತಾವನೆ ಇಲ್ಲ, ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ: ಸುಪ್ರೀಂಗೆ ಕೇಂದ್ರ
ಕೋವಿಡ್-19 ಲಸಿಕೆಯನ್ನು ಮನೆ ಬಾಗಿಲಿಗೆ ತೆರಳಿ ನೀಡುವ ಪ್ರಸ್ತಾವನೆ ಇಲ್ಲ, ಕೇವಲ ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ನವದೆಹಲಿ: ಕೋವಿಡ್-19 ಲಸಿಕೆಯನ್ನು ಮನೆ ಬಾಗಿಲಿಗೆ ತೆರಳಿ ನೀಡುವ ಪ್ರಸ್ತಾವನೆ ಇಲ್ಲ, ಕೇವಲ ನೋಂದಾಯಿತ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಒಳ್ಳೆಯ, ತರ್ಕಬದ್ಧ ಕಾರಣಗಳನ್ನಿಟ್ಟುಕೊಂಡೇ ಕೋವಿನ್ ನೋಂದಣಿ ಪೋರ್ಟಲ್ ಮೂಲಕವೇ ಲಸಿಕೆ ನೀಡುವ ಕ್ರಮವನ್ನು ಅನುಸರಿಸಲಾಗುತ್ತಿದೆ ಎಂದು ಕೇಂದ್ರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.
ಕೋವಿಡ್-19 ಲಸಿಕೆ ಕೇಂದ್ರಗಳಲ್ಲಿ ಸಮರ್ಪಕ ಸ್ಥಳ, ಕೋಲ್ಡ್ ಸ್ಟೋರೇಜ್ ಸೌಲಭ್ಯ, ಸಮರ್ಪಕ ಲಸಿಕೆಗಳು ಹಾಗೂ ಲಸಿಕೆ ನೀಡಿದ ಬಳಿಕ ಪ್ರತಿಕೂಲ ಪರಿಣಾಮ ಎದುರಾದಲ್ಲಿ ಅದನ್ನು ನಿಭಾಯಿಸುವುದಕ್ಕೆ ವೈದ್ಯಕೀಯ ಸಪೋರ್ಟ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ, ಒಂದು ವೇಳೆ ಮನೆ ಬಾಗಿಲಿಗೆ ತೆರಳಿ ಲಸಿಕೆ ನೀಡಿದರೆ ಇವುಗಳನ್ನು ಹೊಂದಿಸುವುದು ಕಷ್ಟವಾಗಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಗೆ ಮನವರಿಕೆ ಮಾಡಿಕೊಟ್ಟಿದೆ.
ಕೋವಿಡ್-19 ಲಸಿಕೆಗೆ ರಾಷ್ಟ್ರವ್ಯಾಪಿ ಸಮೂಹ ಜಾಗೃತಿ ಹಾಮ್ಮಿಕೊಂಡು, ಮೊಬೈಲ್ ವಾಹನಗಳು, ರೈಲ್ವೆ, ವಾಹನಗಳನ್ನು ಬಳಕೆ ಮಾಡಿಕೊಂಡು ಗ್ರಾಮೀಣ ಪ್ರದೇಶಗಳನ್ನು ಹಾಗೂ ಸೌಲಭ್ಯ ವಂಚಿತ ಪ್ರದೇಶಗಳನ್ನು ತಲುಪುವುದಕ್ಕೆ ಸಾಧ್ಯವಿದೆಯೇ? ಅಂತಹ ಪ್ರದೇಶಗಳಲ್ಲಿರುವ ಜನತೆಗೆ ಮನೆ ಬಾಗಿಲಿಗೇ ತೆರಳಿ ಲಸಿಕೆ ನೀಡುವುದಕ್ಕೆ ಯೋಜನೆಗಳಿವೆಯೇ? ಎಂಬ ಕೋರ್ಟ್ ನ ಪ್ರಶ್ನೆಗೆ ಕೇಂದ್ರ ಉತ್ತರ ನೀಡಿದೆ.
ಈ ಸಂಬಂಧ ಕೋರ್ಟ್ ಗೆ ಕೇಂದ್ರ ಸರ್ಕಾರ 218 ಪುಟಗಳ ವಿಸ್ತೃತ ಪ್ರಮಾಣಪತ್ರವನ್ನು ನೀಡಿದ್ದು, ಫಲಾನುಭವಿಗಳು ಕೋವಿನ್ ಮೂಲಕವೇ ತಮ್ಮ ಹತ್ತಿರದ ಕೋವಿಡ್-19 ಲಸಿಕೆ ಕೇಂದ್ರಗಳನ್ನು ಪತ್ತೆ ಮಾಡಬಹುದಾಗಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


