ಟಾಟಾನಗರದಿಂದ ಬೆಂಗಳೂರಿಗೆ ಮೊದಲ 'ಆಕ್ಸಿಜನ್ ಎಕ್ಸ್ ಪ್ರೆಸ್' ಪ್ರಯಾಣ- ಪಿಯೂಷ್ ಗೋಯಲ್
ರಾಜ್ಯದಲ್ಲಿನ ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ಒದಗಿಸುವ ನಿಟ್ಟಿನಲ್ಲಿ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನತ್ತ ಹೊರಟಿದೆ.

ನವದೆಹಲಿ: ರಾಜ್ಯದಲ್ಲಿನ ಕೋವಿಡ್-19 ರೋಗಿಗಳಿಗೆ ಆಕ್ಸಿಜನ್ ಒದಗಿಸುವ ನಿಟ್ಟಿನಲ್ಲಿ ಮೊದಲ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನತ್ತ ಹೊರಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಟಾಟಾನಗರದಿಂದ ಲಿಕ್ವಿಡ್ ಆಮ್ಲಜನಕದ ಕಂಟೇನರ್ ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲಿನ ಮೂಲಕ ಆರು ಕಂಟೇನರ್ ಗಳಲ್ಲಿ ಆಮ್ಲಜನಕವನ್ನು ರಾಜ್ಯಕ್ಕೆ ಪೂರೈಸುತ್ತಿದೆ. ಇದರಿಂದ ರಾಜ್ಯದಲ್ಲಿನ ಕೋವಿಡ್ ಪೀಡಿತರಿಗೆ ಹೆಚ್ಚಿನ ಅನುಕೂಲಕವಾಗಲಿದೆ ಎಂದು ಪಿಯೂಷ್ ಗೋಯಲ್ ಟ್ವೀಟರ್ ಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


