ದೇಶ

ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳಿಗೆ ಹೆಚ್ಚುವರಿಯಾಗಿ 7 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆ: ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 90 ಲಕ್ಷಕ್ಕೂ ಹೆಚ್ಚು ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿಯಾಗಿ 7 ಲಕ್ಷಕ್ಕೂ ಹೆಚ್ಚು ಡೋಸ್ ಕಳುಹಿಸಲಾಗುವುದು

ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳಿಗೆ ಹೆಚ್ಚುವರಿಯಾಗಿ 7 ಲಕ್ಷ ಡೋಸ್ ಕೋವಿಡ್ ಲಸಿಕೆ ರವಾನೆ: ಕೇಂದ್ರ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 90 ಲಕ್ಷಕ್ಕೂ ಹೆಚ್ಚು ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿಯಾಗಿ 7 ಲಕ್ಷಕ್ಕೂ ಹೆಚ್ಚು ಡೋಸ್ ಕಳುಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೇಂದ್ರ ಸರ್ಕಾರ ಈವರೆಗೆ 18 ಕೋಟಿಗೂ ಹೆಚ್ಚು ಡೋಸ್ ಲಸಿಕೆ (18,00,03,160) ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಲಾಗಿದೆ. ಇದರಲ್ಲಿ, ತ್ಯಾಜ್ಯಗಳು ಸೇರಿದಂತೆ ಒಟ್ಟು 17,09,71,429 ಡೋಸ್ ಲಸಿಕೆ ಬಳಕೆಯಾಗಿದೆ ಎಂದು ತಿಳಿಸಿದೆ.

"ಇನ್ನೂ 90 ಲಕ್ಷಕ್ಕೂ ಹೆಚ್ಚು ಡೋಸ್ ಕೋವಿಡ್ ಲಸಿಕೆ (90,31,691) ರಾಜ್ಯಗಳು ಮತ್ತು ಪ್ರದೇಶಗಳಲ್ಲಿ ಲಭ್ಯವಿದೆ. ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೆಚ್ಚುವರಿಯಾಗಿ 7,29,610 ಡೋಸ್ ಲಸಿಕೆ ಸ್ವೀಕರಿಸಲಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಭಾರತ ಸರ್ಕಾರವು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಗೆ ಬೆಂಬಲ ನೀಡುತ್ತಿದೆ ಎಂದು ಸಚಿವಾಲಯ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.