ದೇಶ

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಮಾಜಿ ಸಿಬಿಐ ಅಧಿಕಾರಿ ಕೊರೋನಾಗೆ ಬಲಿ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಅವರು ಬುಧವಾರ ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಮಾಜಿ ಸಿಬಿಐ ಅಧಿಕಾರಿ ಕೊರೋನಾಗೆ ಬಲಿ
ಕೆ ರಗೋಥಮನ್
Published On :

ಚೆನ್ನೈ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಅವರು ಬುಧವಾರ ಮಹಾಮಾರಿ ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.

76 ವರ್ಷದ ರಗೋಥಮನ್ ಅವರಿಗೆ ಕೆಲವು ದಿನಗಳ ಹಿಂದೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಹೀಗಾಗಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. 

ಸಿಬಿಐ ಮಾಜಿ ಅಧಿಕಾರಿ ಕೆ ರಗೋಥಮನ್ ಅವರಿಗೆ ನಾಲ್ಕು ಮಕ್ಕಳಿದ್ದು, ಅವರ ಪತ್ನಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದಾರೆ. 

ರಗೋಥಮನ್ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡದಲ್ಲಿದ್ದರು. ಅವರು ಹಲವಾರು ಪುಸ್ತಕಗಳನ್ನು ಬರೆದಿದ್ದು, ಸಿಬಿಐನಲ್ಲಿ ಪೊಲೀಸ್ ಅಧೀಕ್ಷಕರಾಗಿ ನಿವೃತ್ತರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.