ಆಂಧ್ರದಲ್ಲಿ ಲಾರಿಗೆ ಕಾರು ಡಿಕ್ಕಿ: 5 ತಿಂಗಳ ಮಗು ಸೇರಿ ನಾಲ್ವರು ದುರ್ಮರಣ
ಜಿಲ್ಲೆಯ ಪೆದ್ದಾಪುರಂ ಹೊರವಲಯದಲ್ಲಿ ಜಲ್ಲಿ ಕಲ್ಲು ತುಂಬಿದ್ದ ಲಾರಿಗೆ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಐದು ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ.

ಕಾಕಿನಾಡ: ಜಿಲ್ಲೆಯ ಪೆದ್ದಾಪುರಂ ಹೊರವಲಯದಲ್ಲಿ ಜಲ್ಲಿ ಕಲ್ಲು ತುಂಬಿದ್ದ ಲಾರಿಗೆ ನಿಯಂತ್ರಣ ತಪ್ಪಿದ ಕಾರೊಂದು ಡಿಕ್ಕಿ ಹೊಡೆದು ಅದರಲ್ಲಿ ಪ್ರಯಾಣಿಸುತ್ತಿದ್ದ ಐದು ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ ಐವರು ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ.
ತಮ್ಮ ಸಂಬಂಧಿಕರೊಬ್ಬರ ಕಟ್ಟಡ ಶಿಲಾನ್ಯಾಸ ಸಮಾರಂಭಕ್ಕೆ ಹಾಜರಾಗಲು ತಲ್ಲರೇವು ಮಂಡಲದ ಪೆದ್ದವಲಸ ಗ್ರಾಮದಿಂದ ರಾಜಮಂಡ್ರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಕಾರಿನಲ್ಲಿದ್ದ ಎಲ್ಲ ಒಂಬತ್ತು ಮಂದಿ ನಜ್ಜುಗಜ್ಜಾದ ಕಾರ್ ನೊಳಗೆ ಸಿಕ್ಕಿಬಿದ್ದಿದ್ದರು. ಸ್ಥಳೀಯ ಗ್ರಾಮಸ್ಥರು ಹರಸಾಹಸ ಪಟ್ಟು ಬಾಗಿಲುಗಳು ಒಡೆದು ಎಲ್ಲರನ್ನೂ ಹೊರತೆಗೆದಿದ್ದಾರೆ. ಆದರೆ ಅಷ್ಟರಲ್ಲೇ ನಾಲ್ವರು ಮೃತಪಟ್ಟಿದ್ದರು.
ಅಪಘಾತದಲ್ಲಿ ಕಾರು ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದು ಅವರನ್ನು ಕಾಕಿನಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೆಕ್ಷನ್ 337 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


