ಕೋವಿಡ್-19 ಗ್ರಾಮಗಳಿಗೂ ಹರಡುತ್ತಿದೆ, ಪ್ರತಿಭಟನೆ ನಿಲ್ಲಿಸಿ: ರೈತರಿಗೆ ಹರ್ಯಾಣ ಸಿಎಂ
ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪತ್ರ ಬರೆದಿದ್ದು ಕೋವಿಡ್-19 ಹಿನ್ನೆಲೆ ತಕ್ಷಣವೇ ಪ್ರತಿಭಟನೆಯನ್ನು ನಿಲ್ಲಿಸಲು ಮನವಿ ಮಾಡಿದ್ದಾರೆ.

ಚಂಡೀಗಢ: ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಪತ್ರ ಬರೆದಿದ್ದು ಕೋವಿಡ್-19 ಹಿನ್ನೆಲೆ ತಕ್ಷಣವೇ ಪ್ರತಿಭಟನೆಯನ್ನು ನಿಲ್ಲಿಸಲು ಮನವಿ ಮಾಡಿದ್ದಾರೆ.
ರೈತರ ನಡೆ ಹಾಗೂ ಪ್ರತಿಭಟನೆಗಳಿಂದಾಗಿ ಗ್ರಾಮೀಣ ಭಾಗಗಳಿಗೂ ಕೋವಿಡ್-19 ಸೋಂಕು ಹರಡುತ್ತಿದೆ ಎಂದು ಪತ್ರದ ಮೂಲಕ ಖಟ್ಟರ್ ಎಚ್ಚರಿಸಿದ್ದಾರೆ.
ಕೋವಿಡ್-19 ಪರಿಸ್ಥಿತಿ ತಹಬದಿಗೆ ಬಂದ ನಂತರ ಬೇಕಾದಲ್ಲಿ ನೀವು ಮತ್ತೆ ಪ್ರತಿಭಟನೆಯನ್ನು ಪುನಃ ಪ್ರಾರಂಭಿಸಿ, ಆದರೆ ಈಗ ತಕ್ಷಣವೇ ಪ್ರತಿಭಟನೆ ನಿಲ್ಲಿಸಿ ಎಂದು ಖಟ್ಟರ್ ಮನವಿ ಮಾಡಿದ್ದಾರೆ. ಕನಿಷ್ಟ ಒಂದು ತಿಂಗಳ ಕಾಲವಾದರೂ ರೈತರು ತಮ್ಮ ಪ್ರತಿಭಟನೆಗಳನ್ನು ನಿಲ್ಲಿಸಬೇಕಿದೆ ಎಂದು ಖಟ್ಟರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


