ದೇಶ

ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 13 ರೋಗಿಗಳು ಸಾವು; ನಾಲ್ಕು ದಿನದಲ್ಲಿ 70ಕ್ಕೂ ಹೆಚ್ಚು ಸಾವು

ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ ಹದಿಮೂರು ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ ಮತ್ತೆ 13 ರೋಗಿಗಳು ಸಾವು; ನಾಲ್ಕು ದಿನದಲ್ಲಿ 70ಕ್ಕೂ ಹೆಚ್ಚು ಸಾವು
ಸಾಂದರ್ಭಿಕ ಚಿತ್ರ
Published On :

ಪಣಜಿ: ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್)ಯಲ್ಲಿ ಶುಕ್ರವಾರ ಬೆಳಗ್ಗೆ ಮತ್ತೆ ಹದಿಮೂರು ಕೋವಿಡ್ -19 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರೊಂದಿಗೆ ಗೋವಾದ ಅತಿದೊಡ್ಡ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ದಿನದಲ್ಲಿ 75 ರೋಗಿಗಳು ಮೃತಪಟ್ಟಿದ್ದಾರೆ.

ಜಿಎಂಸಿಎಚ್ ಸಾವಿಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಲ್ಲಿ ವಿಚಾರಣೆ ನಡೆಯುತ್ತಿರುವಾಗಲೇ ಕೋವಿಡ್ ಆಸ್ಪತ್ರೆಯ ಭಯಾನಕತೆ ಮುಂದುವರೆದಿದೆ.

ಜಿಎಂಸಿಎಚ್‌ನ ಇತ್ತೀಚಿನ ಸಾವುಗಳಿಗೆ ರಾಜ್ಯ ಸರ್ಕಾರ ನಿಖರವಾದ ಕಾರಣವನ್ನು ಬಹಿರಂಗಪಡಿಸದಿದ್ದರೂ, ರೋಗಿಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಸಂಬಂಧಿಸಿದ "ಲಾಜಿಸ್ಟಿಕ್ ಸಮಸ್ಯೆಗಳು" ಇವೆ ಎಂದು ಹೈಕೋರ್ಟ್‌ಗೆ ತಿಳಿಸಿದೆ.

ಜಿಎಂಸಿಎಚ್ ನಲ್ಲಿ ದಾಖಲಾಗಿದ್ದ 13 ಕೋವಿಡ್ ರೋಗಿಗಳು ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಆಸ್ಪತ್ರೆಯಲ್ಲಿ ರಾತ್ರಿ 2 ಗಂಟೆಯಿಂದ ಬೆಳಗಿನ ಜಾವ 6 ಗಂಟೆಯ ಒಳಗೆ ಮೃತಪಟ್ಟವರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.