12ನೇ ತರಗತಿಯ ಸಿಬಿಎಸ್‌ಇ, ಐಸಿಎಸ್‌ಇ ಪರೀಕ್ಷೆ ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ
ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹಿನ್ನೆಲೆಯಲ್ಲಿ 12ನೇ ತರಗತಿಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶನ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಹಿನ್ನೆಲೆಯಲ್ಲಿ 12ನೇ ತರಗತಿಯ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ನಿರ್ದೇಶನ ಕೋರಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಅರ್ಜಿದಾರರ ಪರ ವಕೀಲ ಮಮತಾ ಶರ್ಮಾ, ಮುಗ್ಧ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಅನಿಯಂತ್ರಿತ, ಅಮಾನವೀಯ
ನಿರ್ದೇಶನಗಳನ್ನು ನೀಡಲಾಗಿದೆ. ಕಳೆದ ವರ್ಷ ಅವರು ಪ್ರಸ್ತಾಪಿಸಿದ ಮತ್ತು ಅಂಗೀಕರಿಸಿದ ನಿರ್ದೇಶನಗಳನ್ನು ಅನುಸರಿಸುವ ಬದಲು ಅಂತಿಮ ಪರೀಕ್ಷೆಯನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಬೇಕು ಎಂದು ಕೋರಲಾಗಿದೆ.
12ನೇ ತರಗತಿಯ ಫಲಿತಾಂಶಗಳನ್ನು ನಿರ್ದಿಷ್ಟ ಸಮಯದೊಳಗೆ ಘೋಷಿಸಲು ವಸ್ತುನಿಷ್ಠ ವಿಧಾನವನ್ನು ರೂಪಿಸುವಂತೆ ಮನವಿ ಮಾಡಲಾಗಿದ್ದು, ಆನ್‌ಲೈನ್ ಅಥವಾ ಆಫ್‌ಲೈನ್ ಪರೀಕ್ಷೆಗಳು ಸಹ ಪ್ರಸ್ತುತ ಪರಿಸ್ಥಿತಿಯಲ್ಲಿ ಕಾರ್ಯಸಾಧ್ಯವಲ್ಲ ಎಂದು ಮಮತಾ ಶರ್ಮಾ ಹೇಳಿದ್ದಾರೆ.
ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮತ್ತು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್‌ಸಿಇ) ಈ ಹಿಂದೆ ನೀಡಿದ ಅಧಿಸೂಚನೆಗಳನ್ನು ಬದಿಗಿರಿಸಿ, 12 ನೇ ತರಗತಿ ಫಲಿತಾಂಶ ಘೋಷಣೆಯ ವಿಳಂಬವು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅಡ್ಡಿಯಾಗುತ್ತದೆ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.
ನಡೆಯುತ್ತಿರುವ ಸಾಂಕ್ರಾಮಿಕದ ಮಧ್ಯೆ, ಮೇ 4 ರಿಂದ ಜೂನ್ 14 ರವರೆಗೆ ನಡೆಯಬೇಕಿದ್ದ 12 ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ. 12 ನೇ ತರಗತಿ ಫಲಿತಾಂಶಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಆಧಾರವಾಗಿರುವುದರಿಂದ, ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಲಾಗಿತ್ತು.
ಜೂನ್ 1 ರಂದು ಪರಿಸ್ಥಿತಿಯನ್ನು ಪರಿಶೀಲಿಸುವುದಾಗಿ ಸಿಬಿಎಸ್‌ಇ ತಿಳಿಸಿದೆ.
ಪರೀಕ್ಷೆಗಳು ಪ್ರಾರಂಭವಾಗುವ ಮೊದಲು ಕನಿಷ್ಠ 15 ದಿನಗಳ ನೋಟಿಸ್ ನೀಡಲಾಗುವುದು ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


