ಟೌಕ್ಟೇ ಸೈಕ್ಲೋನ್: ಸಂಕಷ್ಟದಲ್ಲಿರುವ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ರಾಹುಲ್ ಸೂಚನೆ
ಟೌಕ್ಟೇ ಚಂಡಮಾರುತ ಆರಂಭವಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಸೂಚನೆ ನೀಡಿದ್ದಾರೆ.

ನವದೆಹಲಿ: ಟೌಕ್ಟೇ ಚಂಡಮಾರುತ ಆರಂಭವಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸಹಾಯಕ್ಕೆ ಧಾವಿಸುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಸೂಚನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಹಾಗೂ ಕರ್ನಾಟಕ ರಾಜ್ಯದಲ್ಲಿ ಚಂಡಮಾರುತದ ಎಚ್ಚರಿಕೆಯನ್ನು ನೀಡಲಾಗಿದೆ. ಹೀಗಾಗಿ ಆಗತ್ಯವಿರುವವರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿಕೊಂಂಡಿದ್ದಾರೆ. ಅಲ್ಲದೆ, ಸುರಕ್ಷಿತತೆ ಇರುವಂತೆಯೂ ಸೂಚಿಸಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದಿರುವ ಟೌಕ್ಟೇ ಚಂಡಮಾರುತ, ಶನಿವಾರ ಗಂಭೀರ ಸ್ವರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಸಾಮಾನ್ಯದಿಂದ ಭಾರೀ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಈ ವೇಳೆ ಗಂಟೆಗೆ 150-175 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಹೀಗಾಗಿ ಕರಾವಳಿ ಪ್ರದೇಶಗಳಲ್ಲಿನ ಜನರಿಗೆ ಎಚ್ಚರಿಕೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


