ಅಮೃತಸರ: ಆರು ಬಾರಿ ಸಂಸದರಾಗಿದ್ದ ಕಾಂಗ್ರೆಸ್ ನಾಯಕ ರಘುನಂದನ್ ಲಾಲ್ ಭಾಟಿಯಾ ನಿಧನ
ಹಿರಿಯ ಕಾಂಗ್ರೆಸ್ ನಾಯಕ, ಆರು ಬಾರಿ ಸಂಸದರಾಗಿದ್ದ ರಘುನಂದನ್ ಲಾಲ್ ಭಾಟಿಯಾ ಅವರು (100) ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.

ಅಮೃತಸರ: ಹಿರಿಯ ಕಾಂಗ್ರೆಸ್ ನಾಯಕ, ಆರು ಬಾರಿ ಸಂಸದರಾಗಿದ್ದ ರಘುನಂದನ್ ಲಾಲ್ ಭಾಟಿಯಾ ಅವರು (100) ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ.
ಶುಕ್ರವಾರ ರಾತ್ರಿ ಅಮೃತಸರದ ಖಾಸಗಿ ಆಸ್ಪತ್ರೆಯಲ್ಲಿ ರಘುನಂದನ್ ಅವರು ಕೊನೆ ಉಸಿರೆಳೆದಿದ್ದಾರೆ. ರಘುನಂದನ್ ಅವರು ಅಮೃತಸರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
1972ರಲ್ಲಿ ಮೊದಲ ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು. ಬಳಿಕ 1980, 1985, 1992, 1996 ಮತ್ತು 1999ರಲ್ಲೂ ಕಾಂಗ್ರೆಸ್ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು.
1992ರಲ್ಲಿ ವಿದೇಶಾಂಗ ವ್ಯವಹಾರಗಳ ಇಲಾಖೆಯ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಅವರು, 2004ರಿಂದ 2008ರ ತನಕ ಕೇರಳ ಮತ್ತು 2008ರಿಂದ 2009ರ ತನಕ ಬಿಹಾರದ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


