ಪಶ್ಚಿಮ ಬಂಗಾಳ ರಾಜ್ಯಪಾಲ ಜಿಗಣೆ ಇದ್ದಂಗೆ; ಹುಚ್ಚು ನಾಯಿ ತರ ಓಡಾಡ್ತಿದಾರೆ: ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ
ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ವು ತೃಣಮೂಲ ಕಾಂಗ್ರೆಸ್ ನ ನಾಲ್ವರು ಮುಖಂಡರ ಬಂಧನ ನಂತರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ವಿರುದ್ಧ ಟಿಎಂಸಿ ಮುಖಂಡರು ಮುಗಿಬಿದಿದ್ದು, ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಕೊಲ್ಕತ್ತಾ: ನಾರದ ಲಂಚ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ತೃಣಮೂಲ ಕಾಂಗ್ರೆಸ್ ನ ನಾಲ್ವರು ಮುಖಂಡರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನಕರ್ ವಿರುದ್ಧ ಟಿಎಂಸಿ ಮುಖಂಡರು ಮುಗಿಬಿದಿದ್ದು, ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ರಾಜ್ಯಪಾಲ ಜಗದೀಪ್ ಧನಕರ್ ವಿಚಿತ್ರ ವರ್ತನೆಯ ಜಿಗಣೆ ಇದ್ದಂಗೆ. ಹುಚ್ಚು ನಾಯಿಯಂತೆ ಅಲ್ಲಿ ಇಲ್ಲಿ ಸುತ್ತುತಿರುತ್ತಾರೆ. ಒಂದು ನಿಮಿಷವೂ ಅವರು ಇಲ್ಲಿ ಇರಬಾರದು ಎಂದು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಜೊತೆಗೆ ಸಮಾಲೋಚಿಸದೆ ರಾಜ್ಯಪಾಲರು ಇದನ್ನು ಪ್ರತೀಕಾರವಾಗಿ ಮಾಡಿದ್ದಾರೆ. 2024 ರ ಚುನಾವಣೆಗೆ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ, ಅದಕ್ಕಾಗಿಯೇ ಅವರು ಟಿಎಂಸಿ ವಿರುದ್ಧ ಏನು ಇಷ್ಟಪಡುತ್ತಾರೋ ಅದನ್ನು ಮಾಡುತ್ತಿದ್ದಾರೆ ಎಂದರು.
ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ. ಕೋವಿಡ್-19 ಸಂದರ್ಭದಲ್ಲಿ ಪೊಲೀಸರು ಅನಗತ್ಯವಾಗಿ ಯಾವುದೇ ವ್ಯಕ್ತಿಯನ್ನು
ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಅದರ ಹೊರತಾಗಿಯೂ ಸಿಬಿಐ ಮತ್ತು ಪೊಲೀಸರು ನಮ್ಮ ಸದಸ್ಯರನ್ನು ಬಂಧಿಸಿದ್ದಾರೆ ಎಂದು ಅವರು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


