ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಕೆ ಹೆಚ್ಚಿಸಲು ನಿರಂತರ ಪ್ರಯತ್ನ: ಪ್ರಧಾನಿ ಮೋದಿ
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು 'ಫೀಲ್ಡ್ ಕಮಾಂಡರ್ಸ್' ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ.

ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು 'ಫೀಲ್ಡ್ ಕಮಾಂಡರ್ಸ್' ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ.
9 ರಾಜ್ಯಗಳ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ, ತಮ್ಮ ಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಹೊಸ ವಿಧಾನ ಅನುಸರಿಸಲು ಅವರು ಮುಕ್ತರಾಗಿರುತ್ತಾರೆ. ನೀತಿಯಲ್ಲಿ ಯಾವುದೇ ಬದಲಾವಣೆ ಬಗ್ಗೆ ಯಾವುದೇ ಪ್ರತಿಬಂಧವಿಲ್ಲದೆ ಮುಕ್ತವಾಗಿ ಪ್ರತಿಕ್ರಿಯೆಯನ್ನು ಹಂಚಿಕೊಳ್ಳುವಂತೆ ಸೂಚಿಸಿದರು.
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಲಸಿಕೆ ಬಲವಾದ ಮಾರ್ಗವಾಗಿದೆ ಎಂದು ಪ್ರತಿಪಾದಿಸಿದ ಮೋದಿ, ಅದರ ಬಗ್ಗೆ ಇರುವ ತಪ್ಪು ಕಲ್ಪನೆಗಳನ್ನು ಒಟ್ಟಾಗಿ ಹೋಗಲಾಡಿಸಬೇಕಾಗಿದೆ. ದೊಡ್ಡ ಪ್ರಮಾಣದಲ್ಲಿ ಲಸಿಕೆ ಪೂರೈಕೆಯನ್ನು ಹೆಚ್ಚಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ. ಸಿದ್ಧತೆಗೆ ಅವಕಾಶ ಮಾಡಿಕೊಡಲು ಲಸಿಕೆ ಕಾರ್ಯಕ್ರಮಕ್ಕೂ 15 ದಿನಗಳ ಮುಂಚಿತವಾಗಿ ರಾಜ್ಯಗಳಿಗೆ ಲಸಿಕೆ ಪೂರೈಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಸೋಂಕು ಪರೀಕ್ಷೆ, ಪತ್ತೆ, ಚಿಕಿತ್ಸೆ ಹಾಗೂ ಕೋವಿಡ್ ಸೂಕ್ತ ನಡವಳಿಕೆಗಳು ಸೋಂಕು ಹರಡಂತೆ ಪರಿಶೀಲಿಸುವ ಪ್ರಮುಖ ಅಂಶಗಳಾಗಿವೆ ಎಂದು ಹೇಳಿದ ಪ್ರಧಾನಿ, ಕೋವಿಡ್ ಪಾಸಿಟಿವ್, ಕುಟುಂಬದ ಕೆಲ ಸದಸ್ಯರನ್ನು ಕಳೆದುಕೊಂಡರೂ ಅದ್ಯಾವುದನ್ನು ಲೆಕ್ಕಿಸದೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಹೊಗಳಿದರು.
ಸಾಂಕ್ರಾಮಿಕದ ಎರಡನೇ ಅಲೆ ವೇಳೆಯಲ್ಲಿ ಗ್ರಾಮೀಣ ಮತ್ತು ಸಂಪರ್ಕಕ್ಕೆ ಸಿಗದ ಪ್ರದೇಶಗಳತ್ತ ಹೆಚ್ಚಿನ ಗಮನ ಹರಿಸುವಂತೆ ಸೂಚನೆ ನೀಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


