ಸಿಂಗಾಪುರ ವಿಮಾನ ಸೇವೆ ರದ್ದುಗೊಳಿಸಿ: ಕೇಂದ್ರಕ್ಕೆ ದೆಹಲಿ ಸಿಎಂ ಕೇಜ್ರೀವಾಲ್ ಮನವಿ
ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ಕೋವಿಡ್-19 ಮಕ್ಕಳಿಗೆ "ಅತ್ಯಂತ ಅಪಾಯಕಾರಿ" ಎಂದು ಹೇಳಲಾಗುತ್ತಿರುವುದರಿಂದ ಅಲ್ಲಿಂದ ಆಗಮಿಸುವ ವಿಮಾನ ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿ: ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ಕೋವಿಡ್-19 ಮಕ್ಕಳಿಗೆ "ಅತ್ಯಂತ ಅಪಾಯಕಾರಿ" ಎಂದು ಹೇಳಲಾಗುತ್ತಿರುವುದರಿಂದ ಅಲ್ಲಿಂದ ಆಗಮಿಸುವ ವಿಮಾನ ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ದೆಹಲಿ ಸಿಎಂ, ಸಿಂಗಾಪುರದಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕರೋನಾ ಮಕ್ಕಳಿಗೆ ಅತ್ಯಂತ ಅಪಾಯಕಾರಿ ಎಂದು ಹೇಳಲಾಗುತ್ತಿದೆ. ಭಾರತದಲ್ಲಿ ಇದು ಮೂರನೇ ಅಲೆಯಾಗಿ ಬರಬಹುದು" ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
"ಕೇಂದ್ರ ಸರ್ಕಾರಕ್ಕೆ ನನ್ನ ಮನವಿ: 1. ಸಿಂಗಪುರದೊಂದಿಗಿನ ವಾಯು ಸೇವೆಗಳನ್ನು ತಕ್ಷಣದಿಂದ ರದ್ದುಗೊಳಿಸಬೇಕು.
2. ಮಕ್ಕಳಿಗೆ ಲಸಿಕೆ ಪರ್ಯಾಯಗಳ ಬಗ್ಗೆ ಆದ್ಯತೆಯ ಆಧಾರದ ಮೇಲೆ ಕೆಲಸ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


