ದೇಶ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ 50 ಸಾವಿರ ಪರಿಹಾರ ಘೋಷಣೆ

ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಪ್ರಕಟಿಸಿದ್ದಾರೆ.

ಕೋವಿಡ್-19 ಸೋಂಕಿನಿಂದ ಮೃತಪಟ್ಟ ಕುಟುಂಬಕ್ಕೆ ದೆಹಲಿ ಸರ್ಕಾರದಿಂದ 50 ಸಾವಿರ ಪರಿಹಾರ ಘೋಷಣೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಮೃತಪಟ್ಟ ಪ್ರತಿ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಮಂಗಳವಾರ ಪ್ರಕಟಿಸಿದ್ದಾರೆ.

ಸಂಪಾದನೆ ಮಾಡುತ್ತಿದ್ದ ಪ್ರಮುಖ ವ್ಯಕ್ತಿ ಮೃತಪಟ್ಟಂತಹ ಕುಟುಂಬಗಳಿಗೆ ಪರಿಹಾರದ ಜೊತೆಗೆ ಪ್ರತಿ ತಿಂಗಳು 2500 ಪಿಂಚಣಿಯನ್ನು ಘೋಷಿಸಲಾಗಿದೆ.

ಒಂದು ವೇಳೆ ಗಂಡ ಮೃತಪಟ್ಟಿದ್ದರೆ, ಹೆಂಡತಿಗೆ ಪಿಂಚಣಿ ನೀಡಲಾಗುವುದು, ಪತ್ನಿ ಸಾವನ್ನಪ್ಪಿದ್ದರೆ ಗಂಡನಿಗೆ ಪಿಂಚಣಿ ಸಿಗಲಿದೆ. ಒಂದು ಅವಿವಾಹಿತರು ಮೃತಪಟ್ಟಿದ್ದರೆ, ಅವರ ಪೋಷಕರಿಗೆ ಪಿಂಚಣಿ ದೊರೆಯಲಿದೆ.

ಕೋವಿಡ್ ನಿಂದ ಅನಾಥರಾದ ಅಥವಾ ಫೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅವರ 25 ನೇ ವಯಸ್ಸಿನವರೆಗೂ ಪ್ರತಿ ತಿಂಗಳು 2500 ರೂ. ಪಿಂಚಣಿ  ದೊರೆಯಲಿದೆ.ಅಲ್ಲದೇ ಉಚಿತವಾಗಿ ಶಿಕ್ಷಣ ಕೂಡಾ ಸಿಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.