ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಹೃದ್ರೋಗತಜ್ಞ ಡಾ. ಕೆ.ಕೆ. ಅಗರ್ವಾಲ್ ಕೋವಿಡ್ ಗೆ ಬಲಿ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಹೃದ್ರೋಗತಜ್ಞರಾಗಿದ್ದ ಡಾ. ಕೆ.ಕೆ. ಅಗರ್ವಾಲ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಹೃದ್ರೋಗತಜ್ಞರಾಗಿದ್ದ ಡಾ. ಕೆ.ಕೆ. ಅಗರ್ವಾಲ್ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.
ಡಾ. ಅಗರ್ವಾಲ್ (62) ಈ ಮೊದಲು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ನ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರನ್ನು ಕಳೆದ ವಾರ ಏಮ್ಸ್ಗೆ ದಾಖಲಿಸಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿತ್ತು.
ಕೋವಿಡ್ 19 ಸೋಂಕಿಗೆ ತುತ್ತಾಗಿದ್ದ ಅವರು ಸೋಮವಾರ ರಾತ್ರಿ 11:30ಕ್ಕೆ ಸಾವನ್ನಪ್ಪಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಲಾಕ್ಡೌನ್ ಅವಧಿಯಲ್ಲಿ ಅವರು ವಿವಿಧ ಉಪನ್ಯಾಸ ಮತ್ತು ಶೈಕ್ಷಣಿಕ ಮಾಹಿತಿ ಸರಣಿ ವಿಡಿಯೊ ಮೂಲಕ 10 ಕೋಟಿಗೂ ಅಧಿಕ ಜನರನ್ನು ಆನ್ಲೈನ್ ಬಳಸಿ ತಲುಪಿದ್ದರು.
ಜನರಿಗೆ ವಿವಿಧ ಮಾಹಿತಿ ನೀಡುವ ಮೂಲಕ ಅಸಂಖ್ಯ ಜೀವಗಳನ್ನು ಕಾಪಾಡಿದ್ದರು ಎಂದು ಅವರ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಅವರಿಗೆ 2010 ರಲ್ಲಿ ಪದ್ಮಶ್ರೀ ನೀಡಲಾಯಿತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


