ಗಂಗಾ ನದಿಯಿಂದ ತೇಲಿಬಂದ ಶವಕ್ಕೆ ಪೆಟ್ರೋಲ್, ಟೈರ್ ಬಳಸಿ ಅಂತ್ಯಸಂಸ್ಕಾರ: ಐವರು ಪೊಲೀಸ್ ಕಾನ್ಸ್ ಟೇಬಲ್ ಅಮಾನತು!
ಗಂಗಾ ನದಿಯಿಂದ ತೇಲಿಬಂದ ಶವವೊಂದಕ್ಕೆ ಟೈರ್ ಮತ್ತು ಪೆಟ್ರೋಲ್ ಹಾಕಿ ಅಂತ್ಯಸಂಸ್ಕಾರ ಮಾಡಿದ ಐವರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.

ಬಲ್ಲಿಯಾ: ಗಂಗಾ ನದಿಯಿಂದ ತೇಲಿಬಂದ ಶವವೊಂದಕ್ಕೆ ಟೈರ್ ಮತ್ತು ಪೆಟ್ರೋಲ್ ಹಾಕಿ ಅಂತ್ಯಸಂಸ್ಕಾರ ಮಾಡಿದ
ಐವರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ. ಈ ಘಟನೆಯ ವಿಡಿಯೋ ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.
ನಿನ್ನೆ ದಿನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋವೊಂದರಲ್ಲಿ ಮೃತ ವ್ಯಕ್ತಿಯೊಬ್ಬರ ಶವದ ಅಂತಸಂಸ್ಕಾರ ಮಾಡುವಾಗ ಪೊಲೀಸರು ಕಂಡುಬಂದಿದ್ದಾರೆ ಎಂದು ಎಸ್ ಪಿ ವಿಪಿನ್ ಟಾಡಾ ಹೇಳಿದ್ದಾರೆ. ಅಂತಿಮ ಸಂಸ್ಕಾರದ ವೇಳೆಯಲ್ಲಿ ಪೊಲೀಸರು ಅಸೂಕ್ಷ್ಮತೆಯನ್ನು ಪ್ರದರ್ಶಿಸಿದ್ದಾರೆ. ಐವರು ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದ್ದು, ಈ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಂಗಾ ನದಿಯ ತಟದಲ್ಲಿ ತೇಲಿಬರುವ ಶವಗಳಿಗೆ ಮೇ 15 ರಂದು ಅಂತ್ಯ ಸಂಸ್ಕಾರ ನಡೆಸಲಾಗಿದೆ. ಮೃತದೇಹದ ಮೇಲೆ ಟೈರ್ ಇಟ್ಟು, ಪೆಟ್ರೋಲ್ ಸುರಿದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಪೊಲೀಸ್ ಠಾಣೆ ಎಸ್ ಹೆಚ್ ಒ ಸಂಜಯ್ ತ್ರಿಪಾಠಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


