ಭಾರತದಲ್ಲಿ ಕೊರೋನಾ ಇಳಿಕೆ: ದೇಶದಲ್ಲಿಂದು 2.63 ಲಕ್ಷ ಹೊಸ ಕೇಸ್ ಪತ್ತೆ, 4,349 ಮಂದಿ ಸಾವು
ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,63,533 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 28 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ.

ನವದೆಹಲಿ: ಭಾರತದಲ್ಲಿ ಹೊಸ ಕೊರೋನಾ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 2,63,533 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದು ಕಳೆದ 28 ದಿನಗಳಲ್ಲೇ ಕನಿಷ್ಠ ಪ್ರಮಾಣವಾಗಿದೆ.
ಹಲವು ದಿನಗಳಿಂದ 4 ಲಕ್ಷದ ಆಸುಪಾಸಿನಲ್ಲಿ ದಾಖಲಾಗುತ್ತಿದ್ದ ಹೊಸ ಸೋಂಕಿತರ ಸಂಖ್ಯೆ ಇದೀಗ 3 ಲಕ್ಷಕ್ಕಿಂತ ಕೆಳಗೆ ಇಳಿದಿರುವುದು, 2ನೇ ಅಲೆಯ ಇಳಿಕೆಯ ಸುಳಿವಾಗಿರಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಆದರೆ, ಹೊಸ ಸೋಂಕಿನ ಪ್ರಮಾಣ ಇಳಿದರೂ ಸಾವಿನ ಪ್ರಮಾಣ ಮಾತ್ರ ಇನ್ನೂ ದೊಡ್ಡ ಮಟ್ಟದಲ್ಲಿಯೇ ದಾಖಲಾಗುತ್ತಿರುವು ಆತಂಕಕ್ಕೆ ಕಾರಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 4,349 ಮಂದಿ ವೈರಸ್'ಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 2,78,719ಕ್ಕೆ ತಲುಪಿದೆ. ಇನ್ನು ಒಟ್ಟು ಸೋಂಕಿತರ ಸಂಖ್ಯೆ 2,52,28,996ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 33,53,765ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 4,22,436 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,15,96,512ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 18,69,223 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 31,82,92,881 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,44,53,149 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


