'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಬಾರ್ಜ್ ಮುಳುಗಡೆ: ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವು
'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದ Papaa-305 ಬಾರ್ಜ್ ದುರಂತದಲ್ಲಿ ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: 'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿದ್ದ Papaa-305 ಬಾರ್ಜ್ ದುರಂತದಲ್ಲಿ ನಾಪತ್ತೆಯಾಗಿದ್ದ 75 ಮಂದಿಯ ಪೈಕಿ 22 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ ಕರಾವಳಿ ಪ್ರದೇಶದಲ್ಲಿ ಸುಮಾರು 35 ನಾಟಿಕಲ್ ಮೈಲು ದೂರದಲ್ಲಿ ದುರಂತಕ್ಕೀಡಾಗಿರುವ Papaa-305 ಬಾರ್ಜ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಇನ್ನು 53 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಮಾರು 261 ಮಂದಿಯಿದ್ದ Papaa-305 ಬಾರ್ಜ್ 'ಟೌಕ್ಟೇ' ಚಂಡಮಾರುತದ ಹೊಡೆತಕ್ಕೆ ಸಿಲುಕಿ ಅರೇಬಿಯನ್ ಸಮುದ್ರದಲ್ಲಿ ಮುಳುಗಡೆಯಾಗಿತ್ತು. ಬಾರ್ಜ್ ನಲ್ಲಿದ್ದ 261 ಮಂದಿಯ ಪೈಕಿ 186 ಮಂದಿಯನ್ನು ರಕ್ಷಣಾ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿತ್ತು.
ಸೇನೆಯ ಕಮಾಂಡರ್ ಆಪರೇಷನ್ಸ್ ನ ನೇವಲ್ ಕಮಾಂಡ್ ಎಂ.ಕೆ. ಝಾ ಅವರು ಮಾತನಾಡಿ ಸಾವನ್ನಪ್ಪಿದವರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯಬೇಕಾಗಿದೆ. ಅಷ್ಟೇ ಅಲ್ಲ ಎಲ್ಲಾ ಸಾವು ಪ್ರಕರಣ ಪಿ.305 ಬಾರ್ಜ್ ನ ಸಿಬ್ಬಂದಿಗಳಿಗೆ ಸಂಬಂಧಿಸಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಬೇಕಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


