ದೇಶ

ರಾಜಸ್ಥಾನ: ಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಕೋವಿಡ್ ಗೆ ಬಲಿ

ಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಉದಯಪುರ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ರಾಜಸ್ಥಾನ: ಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಕೋವಿಡ್ ಗೆ ಬಲಿ
ಗೋತಮ್ ಲಾಲ್ ಮೀನಾ
Published On :

ಜೈಪುರ: ಬಿಜೆಪಿ ಶಾಸಕ ಗೋತಮ್ ಲಾಲ್ ಮೀನಾ ಉದಯಪುರ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

56 ವರ್ಷದ ಧರಿಯಾವಾಡ ಕ್ಷೇತ್ರದ ಶಾಸಕ ಗೋತಮ್ ಲಾಲ್ ಮೀನಾ ಪತ್ನಿ ಮತ್ತು ನಾಲ್ಕು ಮಕ್ಕಳನ್ನು ಅಗಲಿದ್ದಾರೆ.

ಮೂರು ಬಾರಿ ಶಾಸಕರಾಗಿದ್ದ ಗೋತಮ್ ಲಾಲ್ ಮೀನಾ ಸಾವಿಗೆ ಸಿಎಂ ಅಶೋಕ್ ಗೆಹ್ಲೋಟ್, ಸ್ಪೀಕರ್ ಸಿಪಿ ಜೋಶಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಪೂನಿಯಾ ಸಂತಾಪ ಸೂಚಿಸಿದ್ದಾರೆ.

ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು, ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.