ದೇಶ

ಉತ್ತರಪ್ರದೇಶ ಸಚಿವ ವಿಜಯ್ ಕಶ್ಯಪ್ ಕೊರೋನಾಗೆ ಬಲಿ: ಪ್ರಧಾನಿ ಮೋದಿ ಸಂತಾಪ

ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ.

ಉತ್ತರಪ್ರದೇಶ ಸಚಿವ ವಿಜಯ್ ಕಶ್ಯಪ್ ಕೊರೋನಾಗೆ ಬಲಿ: ಪ್ರಧಾನಿ ಮೋದಿ ಸಂತಾಪ
ವಿಜಯ್ ಕಶ್ಯಪ್
Published On :

ಲಕ್ನೋ: ಉತ್ತರ ಪ್ರದೇಶ ಸರ್ಕಾರದಲ್ಲಿ ಕಂದಾಯ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್‌ ಕಶ್ಯಪ್‌ ಅವರು ಕೊರೊನಾ ಸೋಂಕಿನಿಂದ ಮೃತರಾಗಿದ್ದಾರೆ. 

53 ವರ್ಷದ ವಿಜಯ್ ಕಶ್ಯಪ್ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಚಾರ್ತವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

ವಿಜಯ್ ಕಶ್ಯಪ್‌ ಅವರ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. 'ಬಿಜೆಪಿ ಮುಖಂಡ ಹಾಗೂ ಉತ್ತರ ಪ್ರದೇಶ ಸಚಿವ ವಿಜಯ್ ಕಶ್ಯಪ್ ಅವರ ನಿಧನದ ಸುದ್ದಿಯಿಂದ ಬೇಸರವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರಿಗೆ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು' ಎಂದು ಟ್ವೀಟ್‌ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.