ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು ಎರಡು ಕೋಟಿ ಡೋಸ್ ಕೋವಿಡ್ ಲಸಿಕೆ ಲಭ್ಯವಿದೆ: ಕೇಂದ್ರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು ಎರಡು ಕೋಟಿ ಡೋಸ್ ಕೋವಿಡ್ -19 ಲಸಿಕೆ ಇನ್ನೂ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ ಸುಮಾರು 26 ಲಕ್ಷ ಡೋಸ್....

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು ಎರಡು ಕೋಟಿ ಡೋಸ್ ಕೋವಿಡ್ -19 ಲಸಿಕೆ ಇನ್ನೂ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ ಸುಮಾರು 26 ಲಕ್ಷ ಡೋಸ್ ಸ್ವೀಕರಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ವ್ಯಾಕ್ಸಿನೇಷನ್ ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆಗಾಗಿ ಭಾರತ ಸರ್ಕಾರದ ಸಮಗ್ರ ಕಾರ್ಯತಂತ್ರದ ಅವಿಭಾಜ್ಯ ಅಂಗವಾಗಿದ್ದು, ಟೆಸ್ಟ್, ಟ್ರ್ಯಾಕ್, ಟ್ರಿಟ್ ಕೋವಿಡ್ ನಿಯಂತ್ರಣಕ್ಕೆ ಸೂಕ್ತವಾದ ನಡವಳಿಕೆಯಾಗಿದೆ ಎಂದು ಕೇಂದ್ರ ಹೇಳಿದೆ.
ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದ ಭಾಗವಾಗಿ, ಕೇಂದ್ರ ಸರ್ಕಾರವು ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಬೆಂಬಲ ನೀಡುತ್ತಿದೆ.
"ಭಾರತ ಸರ್ಕಾರವು ಇಲ್ಲಿಯವರೆಗೆ ಉಚಿತ ಲಸಿಕೆಯ ಕೇಟಗರಿಯಲ್ಲಿ ಮತ್ತು ನೇರವಾಗಿ ರಾಜ್ಯಗಳ ಖರೀದಿಯ ಮೂಲಕ ಒಟ್ಟು 21 ಕೋಟಿಗಿಂತ ಹೆಚ್ಚು ಡೋಸ್ ಲಸಿಕೆ(21,07,31,130)ಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಿದೆ.
ಇದರಲ್ಲಿ ಒಟ್ಟು(ವ್ಯರ್ಥ ಸೇರಿದಂತೆ) 19,09,60,575 ಡೋಸ್ ಬಳಕೆ ಆಗಿದೆ(ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ) ಎಂದು ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


