ದೇಶ

ಕೋವಿಡ್-19: ದೇಶಾದ್ಯಂತ ಒಂದೇ ದಿನ 4,209 ಮಂದಿ ಸಾವು, 2.59 ಲಕ್ಷ ಹೊಸ ಸೋಂಕು ಪ್ರಕರಣ ವರದಿ

ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.59 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,209 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೋವಿಡ್-19: ದೇಶಾದ್ಯಂತ ಒಂದೇ ದಿನ 4,209 ಮಂದಿ ಸಾವು, 2.59 ಲಕ್ಷ ಹೊಸ ಸೋಂಕು ಪ್ರಕರಣ ವರದಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶಾದ್ಯಂತ ಅಬ್ಬರಿಸಿದ್ದ ಮಾರಕ ಕೊರೋನಾ ಸೋಂಕಿನ ಪ್ರಮಾಣ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.59 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, 4,209 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ  ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,59,591 ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,209 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,57,295 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,27,12,735ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 20,61,683 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 32,44,17,870ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಅಂತೆಯೇ ಈವರೆಗೂ 19,18,79,503 ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.