ಪಂಜಾಬ್ ನ ಮೊಗಾದಲ್ಲಿ ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಭೀಕರ ಅಪಘಾತ: ಪೈಲಟ್ ಸಾವು
ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪಂಜಾಬ್ ನ ಮೊಗಾ ಎಂಬಲ್ಲಿ ಅಪಘಾತಕ್ಕೀಡಾದ ಘಟನೆ ಕಳೆದ ತಡರಾತ್ರಿ ನಡೆದಿದೆ. ಯುದ್ಧ ವಿಮಾನದಲ್ಲಿ ಪೈಲಟ್ ದಿನನಿತ್ಯದ ತರಬೇತಿ ನಡೆಸುತ್ತಿದ್ದರು ಎಂದು ಭಾರತೀಯ ವಿಮಾನ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೊಗಾ(ಪಂಜಾಬ್): ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನ ಪಂಜಾಬ್ ನ ಮೊಗಾ ಎಂಬಲ್ಲಿ ಅಪಘಾತಕ್ಕೀಡಾದ ಘಟನೆ ಕಳೆದ ತಡರಾತ್ರಿ ನಡೆದಿದೆ. ಯುದ್ಧ ವಿಮಾನದಲ್ಲಿ ಪೈಲಟ್ ದಿನನಿತ್ಯದ ತರಬೇತಿ ನಡೆಸುತ್ತಿದ್ದರು ಎಂದು ಭಾರತೀಯ ವಿಮಾನ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ವಾಯುಪಡೆಯ ಬಿಸನ್ ಯುದ್ಧ ವಿಮಾನ ಪಶ್ಚಿಮ ವಲಯದಲ್ಲಿ ಅಪ್ಪಳಿಸಿ ಅಪಘಾತಗೊಂಡಿದೆ. ಘಟನೆಯಲ್ಲಿ ಪೈಲಟ್ ಸ್ಕ್ವಾಡ್ರನ್ ಲೀಡರ್ ಅಭಿನವ್ ಚೌಧರಿ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ ವಾಯುಪಡೆ ಕುಟುಂಬಸ್ಥರ ಸಂಕಷ್ಟ ಸಮಯದಲ್ಲಿ ಅವರ ಪರವಾಗಿ ಇರುವುದಾಗಿ ಹೇಳಿದ್ದಾರೆ.
ತನಿಖೆಗೆ ಆದೇಶ: ಕಳೆದ ರಾತ್ರಿ ಸಂಭವಿಸಿದ ಯುದ್ಧ ವಿಮಾನ ಬಿಸನ್ ನ ಅಪಘಾತಕ್ಕೆ ನಿಖರ ಕಾರಣ ತಿಳಿಯಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


