ದೇಶ

ಲೈಂಗಿಕ ಕಿರುಕುಳ ಪ್ರಕರಣ: ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ನಿರ್ದೋಷಿ!

ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಗೋವಾ ಸೆಷನ್ಸ್ ಕೋರ್ಟ್ ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ.

ಲೈಂಗಿಕ ಕಿರುಕುಳ ಪ್ರಕರಣ: ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ನಿರ್ದೋಷಿ!
ತೆಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್ ಪಾಲ್
Published On :

ಪಣಜಿ: ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಗೋವಾ ಸೆಷನ್ಸ್ ಕೋರ್ಟ್ ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ. 

ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತೀರ್ಪನ್ನು ಇದೇ 21ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯವು ಕಳೆದ ಬುಧವಾರ ಹೇಳಿತ್ತು. ಅದರಂತೆ ಇಂದು ತೀರ್ಪು ಪ್ರಕಟಿಸಿದ ಗೋವಾ ಸೆಷನ್ಸ್ ಕೋರ್ಟ್ ತೇಜ್ಪಾಲ್ ನಿರ್ದೋಷಿ ಎಂದು ತೀರ್ಪು ನೀಡಿದೆ. 

ಪ್ರಕರಣದ ಅಂತಿಮ ಹಂತದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್‌ ಕೋರ್ಟ್‌ ನ್ಯಾಯಧೀಶೆ ಕ್ಷಮಾ ಜೋಶಿ ಅವರು, ತಾಂತ್ರಿಕ ಕಾರಣಗಳಿಂದಾಗಿ ತೀರ್ಪನ್ನು ಮೇ 21ಕ್ಕೆ ಕಾಯ್ದಿರಿಸಿದ್ದರು. 

ಮೂರನೇ ಬಾರಿಗೆ ತೀರ್ಪು ಮುಂದೂಡಲಾಗಿತ್ತು
ಇನ್ನು ಪ್ರಕರಣದ ಕುರಿತು ಏಪ್ರಿಲ್ 27ರಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ನ್ಯಾಯಾಧೀಶರು ತೀರ್ಪು ನೀಡುವ ದಿನಾಂಕವನ್ನು ಮೇ 12ಕ್ಕೆ ಮುಂದೂಡಿದ್ದರು. ಬಳಿಕ ಈ ದಿನಾಂಕವನ್ನು ಮೇ 19ಕ್ಕೆ ನಿಗದಿ ಮಾಡಲಾಗಿತ್ತು. ಆದರೆ ಸತತ ಮೂರನೇ ಬಾರಿ ನ್ಯಾಯಾಲಯವು ತೀರ್ಪನ್ನು ಮಂದೂಡಿತ್ತು. 'ಟೌಕ್ಟೇ'  ಚಂಡಮಾರುತದಿಂದಾಗಿ ಗೋವಾದ ಹಲವೆಡೆ ಭಾನುವಾರದಿಂದ ವಿದ್ಯುತ್‌ ವ್ಯತ್ಯಯ ಉಂಟಾಗಿದೆ. 

2013ರಲ್ಲಿ ಗೋವಾದ ಐಷಾರಾಮಿ ಹೋಟೆಲ್‌ನ ಲಿಫ್ಟ್‌ನೊಳಗೆ ಮಹಿಳಾ ಸಹೋದ್ಯೋಗಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವನ್ನು ತರುಣ್ ತೇಜ್ ಪಾಲ್ ಎದುರಿಸುತ್ತಿದ್ದಾರೆ. 2013ರ ನವೆಂಬರ್ 30ರಂದು ತೇಜ್ ಪಾಲ್ ರನ್ನು ಬಂಧಿಸಲಾಗಿತ್ತು. ಬಳಿಕ ತೇಜ್ ಪಾಲ್ ಜಾಮೀನಿನ ಮೇಲೆ  ಬಿಡುಗಡೆಯಾಗಿದ್ದರು. ಬಳಿಕ 2017 ಸೆಪ್ಟೆಂಬರ್ 29ರಂದು ಅತ್ಯಾಚಾರ, ಲೈಂಗಿಕ ದೌರ್ಜನ್ಯ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಗೋವಾ ಸೆಷನ್ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿತ್ತು.

ಈ ಪ್ರಕರಣದ ವಿರುದ್ಧ ತೇಜ್ ಪಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆಗಸ್ಟ್ ನಲ್ಲಿ ಈ ಪ್ರಕರಣದ ತನಿಖೆ  ನಡೆಸಿದ ಸುಪ್ರೀಂ ಕೋರ್ಟ್ ತೇಜ್ ಪಾಲ್ ಅರ್ಜಿ ವಜಾಗೊಳಿಸಿ, ಆರೋಪಗಳನ್ನು ಕೈ ಬಿಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ಅಲ್ಲದೆ ಆರು ತಿಂಗಳೊಳಗೆ ಈ ಪ್ರಕರಣದ ವಿಚಾರಣೆ ಪೂರ್ಣಗೊಳಿಸುವಂತೆ ಗೋವಾ ಕೋರ್ಟ್ ಗೆ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.