ದೇಶದ್ರೋಹ ಪ್ರಕರಣ: ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದನಿಗೆ ಸುಪ್ರೀಂನಿಂದ ಜಾಮೀನು
ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ನವದೆಹಲಿ: ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ವೈಎಸ್ಆರ್ ಕಾಂಗ್ರೆಸ್ ಬಂಡಾಯ ಸಂಸದ ಕೆ.ರಘು ರಾಮಕೃಷ್ಣ ರಾಜು ಅವರಿಗೆ ಶುಕ್ರವಾರ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಬಿ ಆರ್ ಗವಾಯಿ ಅವರ ರಜೆ ಪೀಠ, ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಯಲ್ಲಿರುವ ರಾಜು ಅವರ ವೈದ್ಯಕೀಯ ವರದಿಯನ್ನು ಉಲ್ಲೇಖಿಸಿ ಜಾಮೀನು ನೀಡಿದೆ.
ರಾಜು ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾಧ್ಯಮಗಳಿಗೆ ಯಾವುದೇ ಸಂದರ್ಶನವನ್ನು ನೀಡುವಂತಿಲ್ಲ ಎಂದು ಹೇಳಿದೆ.
ಮುಂದಿನ ಆದೇಶದವರೆಗೂ ರಾಜು ಅವರನ್ನು ನೆರೆಯ ತೆಲಂಗಾಣದ ಸಿಕಂದರಾಬಾದ್‌ನ ಸೇನಾ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಂತೆ ಮೇ 17 ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೆ.ರಘು ರಾಮಕೃಷ್ಣ ರಾಜು ಅವರ ವಿರುದ್ಧ ಆಂಧ್ರ ಪ್ರದೇಶದ ಅಪರಾಧ ತನಿಖಾ ಇಲಾಖೆ(ಸಿಐಡಿ) ದೇಶದ್ರೋಹ ಪ್ರಕರಣ ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


