ದೇಶ

ಅಲೋಪಥಿ ವಿರುದ್ಧ ಅವೈಜ್ಞಾನಿಕ ಹೇಳಿಕೆ: ಬಾಬಾ ರಾಮ್ ದೇವ್ ವಿರುದ್ಧ ಕ್ರಮಕ್ಕೆ ಐಎಂಎ ಆಗ್ರಹ

ಅಲೋಪತಿ ವೈದ್ಯ ಪದ್ಧತಿಯ ಬಗ್ಗೆ ತಿಳಿವಳಿಕೆ ಇಲ್ಲದೇ ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ.

ಅಲೋಪಥಿ ವಿರುದ್ಧ ಅವೈಜ್ಞಾನಿಕ ಹೇಳಿಕೆ: ಬಾಬಾ ರಾಮ್ ದೇವ್ ವಿರುದ್ಧ ಕ್ರಮಕ್ಕೆ ಐಎಂಎ ಆಗ್ರಹ
ಬಾಬಾ ರಾಮ್ ದೇವ್
Published On :

ನವದೆಹಲಿ: ಅಲೋಪತಿ ವೈದ್ಯ ಪದ್ಧತಿಯ ಬಗ್ಗೆ ತಿಳಿವಳಿಕೆ ಇಲ್ಲದೇ ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ.

ಬಾಬಾ ರಾಮ್ ದೇವ್ ವಿರುದ್ಧ ಎಪಿಡೆಮಿಕ್ ಡಿಸೀಸಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಬೇಕು, ಬಾಬಾ ರಾಮ್ ದೇವ್ ಅಲೋಪತಿ ಬಗ್ಗೆ ತಿಳಿವಳಿಕೆ ಇಲ್ಲದೇ ನೀಡುತ್ತಿರುವ ಹೇಳಿಕೆಗಳು ಸುಶಿಕ್ಷಿತ ಜನರಿಗೆ, ಅವರ ಬಲೆಗೆ ಬೀಳುತ್ತಿರುವ ಜನರಿಗೆ ಅಪಾಯವಿದೆ ಎಂದು ಐಎಂಎ ಹೇಳಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಬಾಬಾ ರಾಮ್ ದೇವ್ ಅವರು ಅಲೋಪತಿ ಅವಿವೇಕಿ ವೈದ್ಯಕೀಯ ವಿಜ್ಞಾನ ವಿಡಿಯೋವನ್ನು ಉಲ್ಲೇಖಿಸಿದ್ದು ಬಾಬಾ ರಾಮ್ ದೇವ್ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿವೆ.

"ಅಲೋಪತಿ ಔಷಧಗಳನ್ನು ತೆಗೆದುಕೊಂಡ ಲಕ್ಷಾಂತರ ಮಂದಿ ಈ ವರೆಗೂ ಸಾವನ್ನಪ್ಪಿದ್ದಾರೆ, ಡಿಸಿಜೈ ಅನುಮೋದನೆ ನೀಡಿರುವ ಔಷಧಗಳಾದ ಫ್ಯಾವಿಫ್ಲೂ ಹಾಗೂ ಇನ್ನಿತರ ಔಷಧಗಳು ಕೋವಿಡ್-19 ಚಿಕಿತ್ಸೆಯಲ್ಲಿ ವಿಫಲಗೊಂಡಿವೆ" ಎಂದು ಬಾಬಾ ರಾಮ್ ದೇವ್ ಅವರು ಹೇಳಿರುವುದನ್ನು ಐಎಂಎ ಉಲ್ಲೇಖಿಸಿದೆ 

ಸ್ವತಃ ವೈದ್ಯರಾಗಿರುವ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಸವಾಲು ಆರೋಪಗಳನ್ನು ಸ್ವೀಕರಿಸಿ, ಆಧುನಿಕ ವೈದ್ಯಕೀಯ ಸೌಲಭ್ಯವನ್ನು ವಿಸರ್ಜನೆ ಮಾಡಲಿ ಅಥವಾ ಬಾಬಾ ರಾಮ್ ದೇವ್ ಅವರ ವಿರುದ್ಧ ಎಪಿಡೆಮಿಕ್ ಕಾಯ್ದೆಯಡಿ ಪ್ರಕರಣ ದಾಖಲಿಸಲಿ ಎಂದು ಐಎಂಎ ಆಗ್ರಹಿಸಿದೆ.

ಜನರಲ್ಲಿ ಭಯ ಮೂಡಿಸಿ ಪರಿಸ್ಥಿತಿಯ ಲಾಭವನ್ನು ಪಡೆಯುವುದಕ್ಕೆ ಯತ್ನಿಸುತ್ತಿದ್ದಾರೆ, ಜನರಲ್ಲಿ ಭಯ, ಹತಾಶೆ ಮೂಡಿಸುವ ಮೂಲಕ ತಮ್ಮ ಅಕ್ರಮ ಹಾಗೂ ಅನುಮೋದನೆ ಇಲ್ಲದ ಔಷಧಗಳನ್ನು ಮಾರಾಟ ಮಾಡಿ ಹಣಗಳಿಸಬೇಕೆಂಬ ಉದ್ದೇಶವಿದೆ ಎಂದು ಐಎಂಎ ಆರೋಪಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.