ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 2,57,299 ಹೊಸ ಪ್ರಕರಣ ದಾಖಲು, 4,194 ಮಂದಿ ಸಾವು
ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದೆ, ಕಳೆದ 24 ಗಂಟೆಗಳ ಅವಧಿಯಲ್ಲಿ 2.57 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4,194 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 2,57,299 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ ಇದುವರೆಗೆ 2,62,89,290ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ 4,194 ಸೋಂಕಿತರು ಮೃತಪಟ್ಟಿದ್ದು, ಆ ಮೂಲಕ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ದೇಶದಲ್ಲಿ 2,95,525ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 3,57,630 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 2,30,70,365ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 29,23,400 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ 20,66,285 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಆ ಮೂಲಕ ಒಟ್ಟಾರೆ ಕೋವಿಡ್ ಪರೀಕ್ಷೆಗಳ ಸಂಖ್ಯೆ 32,64,84,155ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


