ಇದುವರೆಗೂ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ 21.80 ಕೋಟಿ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ
ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.90 ಕೋಟಿ ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಇಲ್ಲಿಯವರೆಗೂ 21.80 ಕೋಟಿ ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ 1.90 ಕೋಟಿ ಡೋಸ್ ಕೋವಿಡ್ -19 ಲಸಿಕೆ ಲಭ್ಯವಿದ್ದು, ಇಲ್ಲಿಯವರೆಗೂ 21.80 ಕೋಟಿ ಲಸಿಕೆಯನ್ನು ಕೇಂದ್ರ ಸರ್ಕಾರ ಪೂರೈಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ, ಇನ್ನೂ 40,650 ಡೋಸ್‌ಗಳನ್ನು ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
"ವ್ಯರ್ಥ ಸೇರಿದಂತೆ 2021ರ ಮೇ 22ರವರೆಗೆ ಸರಾಸರಿ ಆಧರಿಸಿ ಒಟ್ಟು 19,90,31,577 ಡೋಸ್ ಲಸಿಕೆ(ಇಂದು ಬೆಳಿಗ್ಗೆ 8 ಗಂಟೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ)" ಬಳಸಿಕೊಳ್ಳಲಾಗಿದೆ ಎಂದು ಸಚಿವಾಲಯ ಹೇಳಿದೆ.
"1.90 ಕೋಟಿಗಿಂತಲೂ ಹೆಚ್ಚು ಡೋಸ್ ಲಸಿಕೆ(1,90,20,313) ಇನ್ನೂ ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಬಳಿ ಲಭ್ಯವಿದೆ" ಎಂದು ಪ್ರಕಟಣೆ ತಿಳಿಸಿದೆ.
ದೇಶಾದ್ಯಂತ ಕೊರೋನಾ ಎರಡನೇ ಅಲೆಯ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2.40 ಲಕ್ಷಕ್ಕೂ ಅಧಿಕ ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 3, ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


