ಕೋವಿಡ್-19: ದೆಹಲಿ, ಹರಿಯಾಣ, ರಾಜಸ್ಥಾನದಲ್ಲಿ ಲಾಕ್ ಡೌನ್ ವಿಸ್ತರಣೆ
ಕೋವಿಡ್-19 ಎರಡನೇ ಅಲೆ ವೇಳೆಯಲ್ಲಿ ಸೋಂಕು ಹಾಗೂ ಸಾವನ್ನು ನಿಯಂತ್ರಿಸಲು ದೆಹಲಿ, ಹರಿಯಾಣ, ರಾಜಸ್ಥಾನ, ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೇ ಅಂತ್ಯದವರೆಗೂ ಈಗಾಗಲೇ ಜಾರಿಗೊಳಿಸಲಾಗಿರುವ ಕೋವಿಡ್- ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.

ನವದೆಹಲಿ: ಕೋವಿಡ್-19 ಎರಡನೇ ಅಲೆ ವೇಳೆಯಲ್ಲಿ ಸೋಂಕು ಹಾಗೂ ಸಾವನ್ನು ನಿಯಂತ್ರಿಸಲು ದೆಹಲಿ, ಹರಿಯಾಣ, ರಾಜಸ್ಥಾನ, ಪುದುಚೇರಿ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮೇ ಅಂತ್ಯದವರೆಗೂ ಈಗಾಗಲೇ ಜಾರಿಗೊಳಿಸಲಾಗಿರುವ ಕೋವಿಡ್- ನಿರ್ಬಂಧಗಳನ್ನು ವಿಸ್ತರಿಸಲಾಗಿದೆ.
ರಾಷ್ಟ್ರ ರಾಜಧಾನಿಯಲ್ಲಿ ಈಗಾಗಲೇ ಇರುವ ಲಾಕ್ ಡೌನ್, ಮತ್ತೆ ಒಂದು ವಾರ ಮುಂದುವರೆಯಲಿದೆ. ಒಂದು ವೇಳೆ ಕೋವಿಡ್-19
ಸಂಖ್ಯೆಯಲ್ಲಿ ಇಳಿಕೆ ಮುಂದುವರೆದರೆ ಮೇ 31ರಿಂದ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ರಾಜಸ್ಥಾನ ಸರ್ಕಾರ ಜೂನ್ 8 ರವರೆಗೂ ಲಾಕ್ ಡೌನ್ ವಿಸ್ತರಿಸಿದೆ. ಕೋವಿಡ್-19 ಪರಿಸ್ಥಿತಿಯಲ್ಲಿ ಗಮನಾರ್ಹ ಸುಧಾರಣೆಯಾದಂತಹ ಜಿಲ್ಲೆಗಳಲ್ಲಿ ಜೂನ್ 1 ರಿಂದ ವಾಣಿಜ್ಯ ಚಟುವಟಿಕೆಗಳಿಗೆ ಕೆಲ ಸಡಿಲತೆ ಅವಕಾಶ ನೀಡುವ ಸಾಧ್ಯತೆಯಿರುವುದಾಗಿ ಅಲ್ಲಿನ ಸರ್ಕಾರ ತಿಳಿಸಿದೆ.
ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿರುವ ಹರಿಯಾಣ ಸರ್ಕಾರ, ಪಾಸಿಟಿವಿಟಿ ಮತ್ತು ಸಾವಿನ ಪ್ರಮಾಣ ಕಡಿಮೆಯಾದರೆ, ಕೆಲ
ವಿನಾಯಿತಿ ನೀಡುವುದಾಗಿ ಹೇಳಿದೆ. ಈ ಹಿಂದೆ ಮೇ 24 ರವರೆಗೂ ಘೋಷಿಸಲಾಗಿದ್ದ ಲಾಕ್ ಡೌನ್ ನ್ನು ಮೇ 31ರವರೆಗೂ ವಿಸ್ತರಿಸಲಾಗಿದೆ. ಆದಾಗ್ಯೂ, ಈ ಅವಧಿಯಲ್ಲಿ ಸ್ವತಂತ್ರವಾದ ಶಾಪ್ ಗಳಂತಹವು ಕಾರ್ಯನಿರ್ವಹಿಸಲು ಕೆಲ ವಿನಾಯಿತಿ ನೀಡಲಾಗುವುದು ಎಂದು ಹರಿಯಾಣ ಮುಖ್ಯ ಕಾರ್ಯದರ್ಶಿ ವಿಜಯ್ ವರ್ಧನ್ ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್-19 ಪ್ರಕರಣಗಳು ನಿರಂತರವಾಗಿ ಮುಂದುವರೆಯುತ್ತಿರುವುದರಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಪುದುಚೇರಿ
ಸರ್ಕಾರ ಭಾನುವಾರ ಆದೇಶಿಸಿದೆ. ಈ ಹಿಂದೆ ಮೇ 10 ರಿಂದ ಮೇ 24ರ ಮಧ್ಯರಾತ್ರಿಯವರೆಗೂ ಎರಡು ವಾರಗಳ ಧೀರ್ಘ ಲಾಕ್ ಡೌನ್ ಘೋಷಿಸಲಾಗಿತ್ತು.
ಇನ್ನೂ ಈಶಾನ್ಯ ರಾಜ್ಯಗಳಲ್ಲಿ ಐಜ್ವಾಲ್ ಮತ್ತಿತರ ಜಿಲ್ಲಾ ಕೇಂದ್ರಗಳಲ್ಲಿ ಈ ಮಾಸಾಂತ್ಯದವರೆಗೂ ಮೀಜೊರಾಂ ಸರ್ಕಾರ ಲಾಕ್ ಡೌನ್ ವಿಸ್ತರಿಸಿದೆ. ನಾಗಾಲ್ಯಾಂಡ್, ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿಯೂ ಈ ಮಾಸಾಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


