ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ನೆರವಿಗೂ ಸೇನೆ ಸಿದ್ಧ: ಜನರಲ್ ಬಿಪಿನ್ ರಾವತ್
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ನೆರವಿಗೂ ಭಾರತೀಯ ಸೇನೆ ಸಿದ್ಧ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹೇಳಿದ್ದಾರೆ.

ನವದೆಹಲಿ: ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ನೆರವಿಗೂ ಭಾರತೀಯ ಸೇನೆ ಸಿದ್ಧ ಎಂದು ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಹೇಳಿದ್ದಾರೆ.
ಮಾರಕ ಕೊರೋನಾ ವೈರಸ್ ನ ಅಬ್ಬರ ದೇಶದಲ್ಲಿ ಮುಂದುವರೆದಿದ್ದು, ಸೋಂಕು ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆಯಾದರೂ, ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಜಾಗತಿಕವಾಗಿ ಮೂರು ಲಕ್ಷ ಕೋವಿಡ್ ಸಾವು ಕಂಡ ಮೂರನೇ ದೇಶ ಎಂಬ ಕುಖ್ಯಾತಿಗೂ ಭಾರತ ಪಾತ್ರವಾಗಿದೆ. ಈ ಬೆಳವಣಿಗೆಗಳ ನಡುವೆಯೇ ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಜ. ಬಿಪಿನ್ ರಾವತ್ ಅವರು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಯಾವುದೇ ರೀತಿಯ ನೆರವಿಗೂ ಭಾರತೀಯ ಸೇನೆ ಸಿದ್ಧ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಸಾಮಾಜಿಕ ಸಂಘಟನೆಯೊಂದು ಆಯೋಜಿಸಿದ್ದ ವರ್ಚುವಲ್ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಕೋವಿಡ್ನಿಂದಾಗಿ ದೇಶದಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು ಈ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ದೇಶದ ಜನರಿಗೆ ಅಗತ್ಯ ನೆರವು ನೀಡಲು ಸೇನೆ ಸಿದ್ಧವಿದೆ. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಯಲು, ಜನರು ಒಟ್ಟಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ಸೇನೆ ಮೂಲಕ ಅಗತ್ಯ ವೈದ್ಯಕೀಯ ಹಾಗೂ ಮೂಲ ಸೌಕರ್ಯಗಳ ನೆರವು ನೀಡಲಾಗುವುದು ಎಂದು ರಾವತ್ ಹೇಳಿದ್ದಾರೆ.
ಇನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ದತ್ತಾಂಶಗಳ ಪ್ರಕಾರ, ಭಾರತದಲ್ಲಿ ಭಾನುವಾರ 2.4 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ಮತ್ತು 3,741 ಸಾವುಗಳು ದಾಖಲಾಗಿವೆ. ಸೋಂಕಿನಲ್ಲಿ ಇಳಿಕೆ ಕಂಡುಬಂದರೂ ಸಾವಿನ ಪ್ರಮಾಣ ಆತಂಕ ಸೃಷ್ಟಿಸಿದೆ. ಸತತ 7ನೇ ದಿನ ದೇಶದಲ್ಲಿ ದೈನಂದಿನ ಸೋಂಕು ಪ್ರಕರಣಗಳ ಸಂಖ್ಯೆ 3ಲಕ್ಷಕ್ಕಿಂತ ಕಡಿಮೆ ಇದೆ.
ಕಳೆದ ವಾರವಷ್ಟೇ ವರ್ಚುವಲ್ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಕೂಡ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಸೋಂಕು ಪ್ರಮಾಣ ಹೆಚ್ಚಳದ ಕುರಿತು ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೆ ಗ್ರಾಮೀಣ ಭಾಗಗದಲ್ಲಿ ಕೋವಿಡ್ ಸೋಂಕಿನ ಕುರಿತು ಹೆಚ್ಚೆಚ್ಚು ಅರಿವು ಮೂಡಿಸುವ ಅಗತ್ಯತೆ ಇದ್ದು, ಸೋಂಕು ತಗ್ಗಿಸಲು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಅಭಿಪ್ರಾಯಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


