ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸಿ ಮನೆಯಲ್ಲಿ ಕಪ್ಪು ಧ್ವಜ ಹಾರಿಸಿದ ನವಜೋತ್ ಸಿಂಗ್ ಸಿಧು
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರೆಸಿರುವ ರೈತರನ್ನು ಬೆಂಬಲಿಸಿ ಪಂಜಾಬ್ ಕಾಂಗ್ರೆಸ್ ನ ಶಾಸಕ ನವಜೋತ್ ಸಿಂಗ್ ಸಿಧು ಪಟಿಯಾಲದಲ್ಲಿರುವ ತಮ್ಮ ನಿವಾಸದ ಮೇಲೆ ಕಪ್ಪು ಧ್ವಜ ಹಾರಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರೆಸಿರುವ ರೈತರನ್ನು ಬೆಂಬಲಿಸಿ ಪಂಜಾಬ್ ಕಾಂಗ್ರೆಸ್ ನ ಶಾಸಕ ನವಜೋತ್ ಸಿಂಗ್ ಸಿಧು ಪಟಿಯಾಲದಲ್ಲಿರುವ ತಮ್ಮ ನಿವಾಸದ ಮೇಲೆ ಕಪ್ಪು ಧ್ವಜ ಹಾರಿಸಿದ್ದಾರೆ.
ಪ್ರತಿಭಟನೆಯ ಭಾಗವಾಗಿ ಮನೆಯಲ್ಲಿಯೇ ಕಪ್ಪುಧ್ವಜ ಹಾರಿಸುತ್ತಿದ್ದೇನೆ, ಪ್ರತಿಯೊಬ್ಬ ಪಂಜಾಬಿಯೂ ರೈತರನ್ನು ಬೆಂಬಲಿಸಬೇಕು ಎಂದು ಸಿಧು ಟ್ವೀಟ್ ಮಾಡಿದ್ದಾರೆ.
ಕಿರು ವಿಡಿಯೋ ಕ್ಲಿಪ್ ನ್ನು ಟ್ವಿಟರ್ ಹ್ಯಾಂಡಲ್ ನಲ್ಲಿ ಹಂಚಿಕೊಂಡಿರುವ ಸಿಧು, ತಮ್ಮ ಪತ್ನಿ ನವ್ಜೋತ್ ಕೌರ್ ಸಿಧು ಅವರೊಂದಿಗೆ ಆರೋಹಣ ಮಾಡಿರುವ "ಕಪ್ಪು ಧ್ವಜ ಕೃಷಿ ಕಾಯ್ದೆಯ ವಿರೋಧದ ಸಂಕೇತ" ಎಂದು ಹೇಳಿದ್ದಾರೆ.
ಪಂಜಾಬ್ ಕೃಷಿ ಸಮುದಾಯವನ್ನು ಸಂಪೂರ್ಣ ನಾಶ ಮಾಡುವ ಮೂರು ಕರಾಳ ಕಾಯ್ದೆಗಳ ವಿರುದ್ಧ ಹೋರಾಡುತ್ತಿದೆ. ಕೇಂದ್ರ ಸರ್ಕಾರ ಹೊಸ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದು 6 ತಿಂಗಳಾದ ಹಿನ್ನೆಲೆಯಲ್ಲಿ ಕೃಷಿ ಸಂಘಟನೆಗಳು ಮೇ.26 ರಂದು ಕರಾಳ ದಿನವನ್ನಾಗಿ ಆಚರಣೆ ಮಾಡಲು ಕರೆ ನೀಡಿವೆ.
2020 ರ ನವೆಂಬರ್ ನಿಂದ ದೆಹಲಿ ಗಡಿ ಭಾಗದಲ್ಲಿ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚ (ಎಸ್ ಕೆಎಂ) ಪ್ರತಿಭಟನೆಯಲ್ಲಿ ನಿರತವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


