ಸಿಬಿಐ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ನೇಮಕ
ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.

ನವದೆಹಲಿ: ಹಿಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಿಸಿ ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ.
ಆದೇಶದ ಪ‍್ರಕಾರ ಜೈಸ್ವಾಲ್ ಅವರ ಅಧಿಕಾರವಧಿ ಎರಡು ವರ್ಷಗಳವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್ ಅವರ ಹೆಸರನ್ನು ಸಿಬಿಐ ನಿರ್ದೇಶಕ ಹುದ್ದೆಗೆ ಸೋಮವಾರ ಅಂತಿಮಗೊಳಿಸಿತ್ತು. ಮಹಾರಾಷ್ಟ್ರ ಕೇಡರ್‌ನ 1985 ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಜೈಸ್ವಾಲ್, ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರಾಗಿದ್ದಾರೆ. ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿಯೂ ಅವರು ಕಾರ್ಯನಿರ್ವಹಿಸಿದ್ದಾರೆ.
ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ) ನ ಭಾಗವಾಗಿದ್ದರೂ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐನಲ್ಲಿ ಸೇವೆ ಸಲ್ಲಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


