ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ: ದೊರೈ ಮುರುಗನ್
ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ.

ಚೆನ್ನೈ: ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಕರ್ನಾಟಕಕ್ಕೆ ತಮಿಳುನಾಡು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ.
ಸುಪ್ರಿಂಕೋರ್ಟ್ ನಲ್ಲಿ ಬಾಕಿ ಉಳಿದಿರುವ ತಮಿಳುನಾಡು ಮನವಿ ಅರ್ಜಿಗಳ ಬಗ್ಗೆ ಉಲ್ಲೇಖಿಸಿರುವ ಅವರು, ಈ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಹೊಸ ಅಣೆಕಟ್ಟು ನಿರ್ಮಾಣಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಕಾರ್ಯ ಮುಂದುವರಿಸುವಂತೆ ಕೇಂದ್ರೀಯ ಜಲ ಆಯೋಗ ಕರ್ನಾಟಕಕ್ಕೆ ನೀಡಿರುವ ಅನುಮತಿಗೆ ತಡೆ ನೀಡುವಂತೆ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ 2018ರ ನವೆಂಬರ್ ನಲ್ಲಿ ಮನವಿ ಅರ್ಜಿ ಸಲ್ಲಿಸಿದೆ.ತಮಿಳುನಾಡಿನ ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಕಾವೇರಿ ಜಲ ನಿರ್ವಹಣೆ ಪ್ರಾಧಿಕಾರ ತನ್ನ ಮೂರು ಸಭೆಗಳಲ್ಲಿ ಮೇಕೆದಾಟು ವಿಷಯವನ್ನು ಕೈಗೆತ್ತಿಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.
ಮೇಕೆದಾಟಿನಲ್ಲಿ ಅನಧಿಕೃತ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿವೆ ಎಂಬ ಮಾಧ್ಯಮ ವರದಿಯನ್ನು ಪರಿಗಣಿಸಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ದಕ್ಷಿಣ ವಲಯ ಈ ಆರೋಪಗಳ ಬಗ್ಗೆ ಪರಿಶೀಲಿಸಲು ಜಂಟಿ ಸಮಿತಿಯನ್ನು ರಚಿಸಿರುವ ಬೆನ್ನಲ್ಲೇ ದೊರೈಮುರುಗನ್ ಈ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


