ದೇಶದಲ್ಲಿನ ಕೋವಿಡ್ ಸಾವುಗಳ ಕುರಿತ ನ್ಯೂಯಾರ್ಕ್ ಟೈಮ್ಸ್ ವರದಿ ಆಧಾರ ರಹಿತ, ತಪ್ಪು: ಕೇಂದ್ರ ಸರ್ಕಾರ
ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ

ನವದೆಹಲಿ: ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಹೇಳಿದೆ. ದೇಶದಲ್ಲಿ ಕೋವಿಡ್-19 ಎರಡನೇ ಅಲೆಯೂ ಕುಸಿಯುತ್ತಿರುವುದನ್ನು ಉಲ್ಲೇಖಿಸಿದೆ.
ದೇಶದಲ್ಲಿನ ಕೋವಿಡ್-19 ಸಾವಿನ ಅಂದಾಜು ಕುರಿತ ಇತ್ತೀಚಿನ ನ್ಯೂಯಾರ್ಕ್ ಟೈಮ್ಸ್ ವರದಿ ಸಂಪೂರ್ಣವಾಗಿ ನಿರಾಧಾರ ಮತ್ತು ತಪ್ಪಿನಿಂದ ಕೂಡಿದೆ. ನ್ಯೂಯಾರ್ಕ್ ಟೈಮ್ಸ್ ವರದಿಯನ್ನು ಯಾವುದೇ ಪುರಾವೆಗಳು ಬೆಂಬಲಿಸುವುದಿಲ್ಲ ಮತ್ತು ವಿಕೃತ ಅಂದಾಜುಗಳ ಮೇಲಿನ ವರದಿ ಇದಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ನಾವು ಕೋವಿಡ್-19 ಎರಡನೇ ಅಲೆಯ ಕುಸಿತದಲ್ಲಿದ್ದು, ನಿರ್ಬಂಧಗಳು ಗಮನಾರ್ಹವಾಗಿ ಸಡಿಲಗೊಂಡರೂ ಕುಸಿತ ಇರಲಿದೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಚಿವಾಲಯ ಹೇಳಿದೆ.
ಕಳೆದ ವಾರದಿಂದಲೂ 24 ರಾಜ್ಯಗಳಲ್ಲಿ ಸಕ್ರಿಯ ಪ್ರಕರಣಗಳು ಕುಸಿತದೊಂದಿಗೆ ಕಳೆದ 20 ದಿನಗಳಲ್ಲಿ ದೇಶದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರವಾಗಿ ಕುಸಿತವಾಗಿದೆ. ಕೋವಿಡ್-19 ಪರೀಕ್ಷೆಯಲ್ಲಿ ಹೆಚ್ಚಳವಾಗಿದ್ದು, ವಾರದ ಕೋವಿಡ್-19 ಪಾಸಿಟಿವಿಟಿ ದರದಲ್ಲಿ ಕಳೆದ ಮೂರು ವಾರಗಳಿಂದಲೂ ಸ್ಥಿರವಾಗಿ ಕಡಿಮೆಯಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ, ಯಾವುದೇ ಗಮನಾರ್ಹ ಪ್ರತಿಕೂಲ ಪರಿಣಾಮ ಅಸಂಭವವಾಗಿದೆ, ಆದರೆ ಈ ನಿಟ್ಟಿನಲ್ಲಿ ನಮಗೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


