ದೇಶ

ಜೀವ ರಕ್ಷಕ ಔಷಧಿ, ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್'ಟಿ ರದ್ದುಪಡಿಸಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ

ಕೊರೋನಾ ಸಾಂಕ್ರಾಮಿಕ ರೋಗ ವಿರುದ್ಧ ಹೋರಾಡಲು ಬಳಕೆ ಮಾಡುತ್ತಿರುವ ಔಷಧಿಗಳು, ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಆಗ್ರಹಿಸಿದ್ದಾರೆ.

ಜೀವ ರಕ್ಷಕ ಔಷಧಿ, ವೈದ್ಯಕೀಯ ಸಲಕರಣೆಗಳ ಮೇಲಿನ ಜಿಎಸ್'ಟಿ ರದ್ದುಪಡಿಸಿ: ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಆಗ್ರಹ
ಪ್ರಿಯಾಂಕಾ ಗಾಂಧಿ
Published On :

ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗ ವಿರುದ್ಧ ಹೋರಾಡಲು ಬಳಕೆ ಮಾಡುತ್ತಿರುವ ಔಷಧಿಗಳು, ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಆಗ್ರಹಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಬಳಸಲಾಗುವ ಎಲ್ಲಾ ಜೀವ ಉಳಿಸುವ ಔಷಧಿಗಳು ಮತ್ತು ಸಲಕರಣೆಗಳ ಮೇಲಿನ ಜಿಎಸ್‌ಟಿಯನ್ನು ತೆಗೆದುಹಾಕಿ.  ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಇವುಗಳ ಮೇಲೆ ತೆರಿಗೆ ವಿಧಿಸುವುದು ಕ್ರೌರ್ಯ ಮತ್ತು ಸಂವೇದನಾರಹಿತ ಕ್ರಮವಾಗುತ್ತದೆ ಎಂದು ಹೇಳಿದ್ದಾರೆ. 

ಸೋಂಕಿಗೊಳಗಾದ ಜನರು ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್, ಔಷಧಿ, ಲಸಿಕೆ ಹಾಗೂ ಆ್ಯಂಬುಲೆನ್ಸ್ ಗಾಗಿ ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಇವುಗಳ ಮೇಲೆ ತೆರಿಗೆ ಹೇರುವುದು ಕ್ರೌರ್ಯ ಮತ್ತು ಸಂವೇದನಾರಹಿತ ಕ್ರಮವಾಗುತ್ತದೆ ಎಂದು ತಿಳಿಸಿದ್ದಾರೆ. 

ಬಹುನಿರೀಕ್ಷಿತ ಜಿಎಸ್'ಟಿ ಮಂಡಳಿ ಸಬೆ ಇಂದು ನಡೆಯುತ್ತಿದ್ದು, ಸಭೆಯಲ್ಲಿ ಕೊರೋನಾ ಸೋಂಕಿತರಿಗೆ ಕಡಿಮೆ ದರದಲ್ಲಿ ಕೋವಿಡ್ ಔಷಧಗಳು, ಲಸಿಕೆಗಳು ಮತ್ತು ಇತರೆ ವೈದ್ಯಕೀಯ ಸಲಕರಣೆಗಳು ಲಭ್ಯವಾಗುವಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆಗಳಿವೆ. 

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸದಸ್ಯರಾಗಿರುವ ಸಮಿತಿ ಸಭೆಯು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಯುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.