ದೇಶ

ಕೋವಿಡ್-19: ಜೂನ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ

ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

ಕೋವಿಡ್-19: ಜೂನ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Published On :

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಒಂದು ವರ್ಷದಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಅದಾಗ್ಯೂ ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ ಮತ್ತು ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ.

ಕಳೆದ ವರ್ಷ ಮಾರ್ಚ್ 25ರಂದು ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು.

ಮೇ 2020 ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಮತ್ತು ಜುಲೈನಿಂದ ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ 'ಏರ್ ಬಬಲ್' ವ್ಯವಸ್ಥೆಗಳ ಅಡಿಯಲ್ಲಿ ವಿಶೇಷ ಅಂತರಾಷ್ಟ್ರೀಯ ವಿಮಾನಯಾನವನ್ನು ಅನುಮತಿಸಲಾಗಿದೆ.

ಭಾರತವು ಯುನೈಟೆಡ್ ಸ್ಟೇಟ್ಸ್, ಯುನೈಟೆಡ್ ಕಿಂಗ್‌ಡಮ್, ಯುನೈಟೆಡ್ ಅರಬ್ ಎಮಿರೇಟ್ಸ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ರೂಪಿಸಿದೆ. ಎರಡು ದೇಶಗಳ ನಡುವಿನಏರ್ ಬಬಲ್ ಒಪ್ಪಂದದಡಿಯಲ್ಲಿ, ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.