ದೊಣ್ಣೆ ಹಿಡಿದು ಸುಶೀಲ್ ಕುಮಾರ್ ಮತ್ತವರ ಸಹಚರರಿಂದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್
ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಸಹಚರರು, ಕೆಲವು ವ್ಯಕ್ತಿಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ

ನವದೆಹಲಿ: ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಒಲಿಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಮತ್ತು ಸಹಚರರು, ಕೆಲವು ವ್ಯಕ್ತಿಗಳಿಗೆ ದೊಣ್ಣೆಯಿಂದ ಹೊಡೆಯುತ್ತಿರುವ ದೃಶ್ಯದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ವ್ಯಕ್ತಿಯೊಬ್ಬ ಗಾಯದಿಂದ ಒದ್ದಾಡುತ್ತ ನೆಲಕ್ಕೆ ಉರುಳಿದ್ದಾನೆ. ಸುಶೀಲ್ ಕುಮಾರ್ ಮತ್ತು ಅವರ ಸಹಚರರು ದೊಣ್ಣೆಗಳಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ವಿಡಿಯೋದ ನೈಜತೆಯ ಕುರಿತಂತೆ ದೆಹಲಿ ಪೊಲೀಸರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಛತ್ರಸಾಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಜಗಳದಲ್ಲಿ ಹಲ್ಲೆಗೊಳಗಾಗಿದ್ದ 23 ವರ್ಷದ ಕುಸ್ತಿಪಟು ಸಾಗರ್ ಅಸುನೀಗಿದ್ದರು. ಇದೇ ಪ್ರಕರಣದಲ್ಲಿ ಸುಶೀಲ್ ಕುಮಾರ್ ಸೇರಿದಂತೆ ಈವರೆಗೆ ಒಟ್ಟು ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಹಲ್ಲೆಯಲ್ಲಿ ಸಾಗರ್ ಸಾವಿಗೀಡಾದರೆ, ಅವರ ಇಬ್ಬರು ಸ್ನೇಹಿತರು ಗಂಭೀರ ಗಾಯಗೊಂಡಿದ್ದರು. ಮಾಡೆಲ್ ಟೌನ್ ಪ್ರದೇಶದಲ್ಲಿನ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮೇ 4ರ ರಾತ್ರಿ ಜಗಳ ನಡೆದಿತ್ತು. ಭಾನುವಾರ, ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಯಿತು. ಅವರ ಸಹಚರರಾದ ಭೂಪೇಂದರ್ (38), ಮೋಹಿತ್ (22), ಗುಲಾಬ್ (24) ಅವರನ್ನು
ಹರಿಯಾಣದ ಝಜ್ಜರ್ ಜಿಲ್ಲೆಯಿಂದ ಹಾಗೂ ರೋಹ್ಟಕ್‌ನಿಂದ ಮಂಜೀತ್ (29) ಎಂಬುವವರನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


