ಮಹಾರಾಷ್ಟ್ರದಲ್ಲಿ ವಸತಿ ಕಟ್ಟಡ ಕುಸಿತ: 7 ಮಂದಿ ದಾರುಣ ಸಾವು
ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ.

ಮುಂಬೈ: ಮಹಾರಾಷ್ಟ್ರದ ಠಾಣೆಯಲ್ಲಿ ಶುಕ್ರವಾರ ರಾತ್ರಿ ವಸತಿ ಕಟ್ಟಡ ಕುಸಿತದ ಪರಿಣಾಮ ಉಂಟಾಗಿರುವ ದುರಂತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ.
ಠಾಣೆಯ ಉಲ್ಹಾಸ್‌ನಗರದಲ್ಲಿ ಕಟ್ಟಡದ ಸ್ಲ್ಯಾಬ್ ಕುಸಿತದ ಪರಿಣಾಮ ದುರಂತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಟ್ಟಡದ ಅವಶೇಷಗಳಿಂದ ಏಳು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮತ್ತಷ್ಟು ಮಂದಿ ಸಿಲುಕಿರುವುದಾಗಿ ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಠಾಣೆ ಮಹಾನಗರ ಪಾಲಿಕೆ (ಟಿಎಂಸಿ) ತಿಳಿಸಿದೆ.
ನೆಹರೂ ಚೌಕ್ ಪ್ರದೇಶದ ಸಾಯಿ ಸಿದ್ಧಿ ಕಟ್ಟಡದ ಐದನೇ ಮಹಡಿಯ ಸ್ಲ್ಯಾಬ್ ಕುಸಿದ ಪರಿಣಾಮ ದುರಂತ ಸಂಭವಿಸಿದೆ ಎಂದು ಪ್ರಾದೇಶಿಕ ವಿಪತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥ ಸಂತೋಷ್ ಕದಮ್ ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೀಡು ಬಿಟ್ಟಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


