ದೇಶ

ಕೋವಿಡ್ ಸೋಂಕಿತ ಎಸ್ ಪಿ ಮುಖಂಡ ಅಜಂ ಖಾನ್ ಆರೋಗ್ಯ ಗಂಭೀರ, ಆಮ್ಲಜನಕ ವ್ಯವಸ್ಥೆ ಅಳವಡಿಕೆ: ಮೆದಾಂತ ಆಸ್ಪತ್ರೆ

ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಕೋವಿಡ್ ಸೋಂಕಿತ ಎಸ್ ಪಿ ಮುಖಂಡ ಅಜಂ ಖಾನ್ ಆರೋಗ್ಯ ಗಂಭೀರ, ಆಮ್ಲಜನಕ ವ್ಯವಸ್ಥೆ ಅಳವಡಿಕೆ: ಮೆದಾಂತ ಆಸ್ಪತ್ರೆ
ಆಜಂ ಖಾನ್
Published On :

ಲಖನೌ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ.

ಅಜಂಖಾನ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ಅವರು ದಾಖಲಾಗಿರುವ ಲಖನೌನ ಮೇದಾಂತ ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದ್ದು, ಅಜಂ ಖಾನ್ ಅವರ ಆರೋಗ್ಯ ಗಂಭೀರವಾಗಿದೆ. ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದ್ದು, ಆಸ್ಪತ್ರೆ ನುರಿತ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆ  ಹೇಳಿಕೆಯಲ್ಲಿ ತಿಳಿಸಿದೆ.

ಅಜಂ ಖಾನ್ ಶ್ವಾಸಕೋಶದಲ್ಲಿ ಸೋಂಕು ಕಂಡುಬಂದ ಬಳಿಕ ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಗಂಭೀರವಾಗಿದ್ದು ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ. ಮೇದಾಂತ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಅಜಂ ಖಾನ್ ಆರೋಗ್ಯದ ಬಗ್ಗೆ ಹೆಚ್ಚಿನ  ಕಾಳಜಿಯಿಂದ ಪರಿಶೀಲನೆ ನಡೆಸುತ್ತಿದೆ ಎಂದು ಮೇದಾಂತ ಆಸ್ಪತ್ರೆ ಹೇಳಿದೆ.

ಸೀತಾಪುರ್ ಜೈಲಿನಿಂದ ಅಜಂ ಖಾನ್ ಮತ್ತು ಅವರ ಪುತ್ರನನ್ನು ಮೇ 9 ರಂದು ಕೋವಿಡ್ ಚಿಕಿತ್ಸೆಗಾಗಿ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.