ದೇಶ

ಕೋವಿಡ್ ನಡುವೆ ಬಿಜೆಪಿ ಕೆಲಸ ಮಾಡುತ್ತಿದ್ದರೆ ಪ್ರತಿಪಕ್ಷಗಳು ಕ್ವಾರಂಟೈನ್ ನಲ್ಲಿವೆ- ಜೆ. ಪಿ.ನಡ್ಡಾ

ಕೊರೋನಾವೈರಸ್ ಸಾಂಕ್ರಾಮಿಕದ ನಡುವೆಯೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರೆ ಪ್ರತಿಪಕ್ಷಗಳು ಕ್ವಾರಂಟೈನ್ ನಲ್ಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಹೇಳಿದ್ದಾರೆ.

ಕೋವಿಡ್ ನಡುವೆ ಬಿಜೆಪಿ ಕೆಲಸ ಮಾಡುತ್ತಿದ್ದರೆ ಪ್ರತಿಪಕ್ಷಗಳು ಕ್ವಾರಂಟೈನ್ ನಲ್ಲಿವೆ- ಜೆ. ಪಿ.ನಡ್ಡಾ
ಜೆ.ಪಿ. ನಡ್ಡಾ
Published On :

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕದ ನಡುವೆಯೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರೆ ಪ್ರತಿಪಕ್ಷಗಳು ಕ್ವಾರಂಟೈನ್ ನಲ್ಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭಾನುವಾರ ಹೇಳಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಏಳನೇ ವರ್ಷಾಚರಣೆ ಅಂಗವಾಗಿ ವರ್ಚುಯಲ್ ನಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷದ ಎಲ್ಲಾ ಸಂಸದರು, ಸಚಿವರು, ಶಾಸಕರು ಕೋವಿಡ್, ಲಾಕ್ ಡೌನ್  ನಿಯಮ ಪಾಲನೆಯೊಂದಿಗೆ ಕನಿಷ್ಠ ಎರಡು ಹಳ್ಳಿಗಳಲ್ಲಿ ಜನರ  ಸೇವೆ ಮಾಡಬೇಕು ಎಂದರು.

ಸಾಂಕ್ರಾಮಿಕ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜನರೊಂದಿಗೆ ಇದ್ದಾರೆ. ಆದರೆ, ಪ್ರತಿಪಕ್ಷ ಮುಖಂಡರು ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಕೊರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಆದರೆ, ಪ್ರತಿಪಕ್ಷ ಮುಖಂಡರು ಕ್ವಾರಂಟೈನ್ ಸೇರಿದ್ದಾರೆ ಎಂದು ಹೇಳಿದರು.

ಆರಂಭದಲ್ಲಿ ಕೊರೋನಾ ಲಸಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದವರು, ಈಗ ಅದರ ಬಗ್ಗೆ ಸದ್ದು ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.